ಹುಕ್ಕೇರಿ: ತಾಲ್ಲೂಕು ಪಂಚಾಯಿತಿ ಸಭಾಭವನದಲ್ಲಿ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ ಜರುಗಿತು.

ಗ್ಯಾರಂಟಿ ಯೋಜನೆ ತಾಲ್ಲೂಕು ಘಟಕದ ಅಧ್ಯಕ್ಷ ಶಾನೂಲ್ ತಹಶೀಲ್ದಾರ್ ಮಾತನಾಡಿ, ಸರ್ಕಾರ ಗೃಹ ಲಕ್ಷ್ಮೀ, ಅನ್ನಭಾಗ್ಯ, ಯುವ ನಿಧಿ, ಗೃಹ ಜ್ಯೋತಿ ಮತ್ತು ಶಕ್ತಿ ಯೋಜನೆ ಜಾರಿಗೆ ತಂದು ಜನರ ಅಭಿವೃದ್ಧಿಗೆ ಬದ್ದವಾಗಿದೆ. ಗ್ಯಾರಂಟಿ ಯೋಜನೆಗಳಿಂದ ಜನರಿಗೆ ಅನುಕೂಲವಾಗಿದೆ ಎಂದು ಹೇಳಿದರು.

ತಾಲ್ಲೂಕಿನಲ್ಲಿ ಗೃಹ ಜ್ಯೋತಿ ಯೋಜನೆಯಡಿ ಏಪ್ರಿಲ್ ಅಂತ್ಯದವರೆಗೆ ಅರ್ಹ ಫಲಾನುಭವಿಗಳ ಸಂಖ್ಯೆ 1,00,982 ಇದ್ದು, ಇಲ್ಲಿಯವರೆಗೆ ನೋಂದಣಿಯಾದವರ ಸಂಖ್ಯೆ 91,212 ಇದೆ. ಸರ್ಕಾರದಿಂದ ₹ 9,889 ಲಕ್ಷ ಬಿಡುಗಡೆಯಾಗಿರುತ್ತದೆ. ಅನ್ನಭಾಗ್ಯ ಯೋಜನೆಯಡಿ 3,257 ಅರ್ಜಿ ಸ್ವೀಕೃತಿಯಾಗಿದ್ದು, 1,757 ಅರ್ಜಿಗಳು ಮಂಜೂರಾಗಿವೆ ಎಂದರು.

ಶಕ್ತಿ ಯೋಜನೆಯಡಿ ಇಲ್ಲಿಯವರೆಗೆ 3,83,26,936 ಮಹಿಳಾ ಪ್ರಯಾಣಿಕರು ಪ್ರಯಾಣಿಸಿರುತ್ತಾರೆ. ಮೊತ್ತ ₹ 87,68,34,182 ಸರ್ಕಾರದಿಂದ ಬಿಡುಗಡೆಯಾಗಿರುತ್ತದೆ. ಯುವನಿಧಿ ಯೋಜನೆಯಡಿ 3,846 ಅಭ್ಯರ್ಥಿಗಳು ನೋಂದಣಿಯಾಗಿದ್ದು ಒಟ್ಟಾರೆ ಮೊತ್ತ ₹ 7,63,57,500 ಡಿ.ಬಿ.ಟಿ. ಮುಖಾಂತರ ಜಮಾ ಆಗಿರುತ್ತದೆ. ಗೃಹ ಲಕ್ಷ್ಮಿ ಯೋಜನೆಯಡಿ ಒಟ್ಟು ಫಲಾನುಭವಿಗಳ ಸಂಖ್ಯೆ: 1,04,273 ಇದ್ದು, ಹಣ ಜಮೆ ಆದ ಫಲಅನುಭವಿಗಳ ಸಂಖ್ಯೆ 97,688 ಇರುತ್ತದೆ. ಫೆಬ್ರುವರಿ ಅಂತ್ಯದವರೆಗೆ ಗೃಹ ಲಕ್ಷ್ಮಿ ಹಣ ಜಮೆ ಆಗಿರುತ್ತದೆ ಎಂದರು.

ತಾಲ್ಲೂಕು ಪಂಚಾಯಿತಿ ಇಒ ಟಿ.ಆರ್. ಮಲ್ಲಾಡದ, ಗ್ಯಾರಂಟಿ ಯೋಜನೆ ತಾಲ್ಲೂಕು ಮಟ್ಟದ ಸದಸ್ಯರಾದ ಸಂಗೀತಾ ಮಾದರ, ಗೋದವ್ವ ಅಗಸರ, ಯಲ್ಲಪ್ಪ ಹಿರೇಕೋಡಿ, ಆನಂದ ಖಾತೆದಾರ, ಸಿದ್ದಪ್ಪ ಶಿಳ್ಳಿ, ಶಾಂತಿನಾಥ ಮಗದುಮ್ಮ, ಶ್ರೀನಿವಾಸ ವ್ಯಾಪಾರಿ, ರಾಜು ಗೊಸರವಾಡಕರ ಹಾಗೂ ಅನುಷ್ಠಾನ ಇಲಾಖೆ ಅಧಿಕಾರಿಗಳು ಹಾಗೂ ತಾಲ್ಲೂಕು ಪಂಚಾಯಿತಿ ಸಿಬ್ಬಂದಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-21-1315146066

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.