ಹುಕ್ಕೇರಿ: ಪಟ್ಟಣದ ಹೊರವಲಯದ ಜಮೀನಿನಲ್ಲಿ ಕುರಿ ಮರಿಗಳ ಮೇಲೆ ಬೀದಿ ನಾಯಿಗಳ ಹಿಂಡು ದಾಳಿ ನಡೆಸಿದ್ದರಿಂದ 6 ಮರಿಗಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶುಕ್ರವಾರ ನಡೆದಿದೆ. ಜತೆಗೆ 8 ಮರಿಗಳಿಗೆ ತೀವ್ರ ಗಾಯಗಳಾಗಿದ್ದು, 5 ಮರಿಗಳು ನಾಪತ್ತೆಯಾಗಿವೆ ಎಂದು ಕುರಿಗಾಯಿ ಅಜಿತ್ ಲಗಮಣ್ಣ ಪೂಜೇರಿ ತಿಳಿಸಿದ್ದಾರೆ.

ಸಂಜೆ ಮೇಯಿಸಲು ಬಿಟ್ಟಿದ್ದ ಕುರಿ ಹಿಂಡಿನ ಮೇಲೆ ಏಕಾಏಕಿ ಬೀದಿ ನಾಯಿಗಳು ದಾಳಿ ಮಾಡಿವೆ. ಕಣ್ಣೆದುರೇ ಮರಿಗಳನ್ನು ಕಚ್ಚಿ ಕೊಂದಿವೆ. ಲಕ್ಷಾಂತರ ರೂಪಾಯಿ ನಷ್ಟವಾಗಿದೆ ಎಂದು ಅವರು ಕಣ್ಣೀರಿಟ್ಟರು.

ಈ ಬಗ್ಗೆ ಪ್ರತಿಕ್ರಿಯಿಸಿದ ಶ್ರೀರಾಮ ಸೇನೆ ಉತ್ತರ ಪ್ರಾಂತ ಕಾರ್ಯದರ್ಶಿ ಶಿವರಾಜ್ ಅಂಬಾರಿ, ಕೂಡಲೇ ಕುರಿಗಾಹಿಗೆ ಸೂಕ್ತ ಪರಿಹಾರ ನೀಡಬೇಕು. ಇಲ್ಲದಿದ್ದರೆ ನಾಳೆ ಕುರಿಗಾಯಿಗಳೊಂದಿಗೆ ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಬೀದಿ ನಾಯಿಗಳ ಹಾವಳಿ ತಡೆದು, ಕುರಿಗಾಹಿಗಳಿಗೆ ರಕ್ಷಣೆ ನೀಡುವಂತೆ ಹಾಗೂ ಮೃತ ಕುರಿ ಮರಿಗಳಿಗೆ ಪರಿಹಾರ ನೀಡುವಂತೆ ಗ್ರಾಮಸ್ಥರು ಪುರಸಭೆ ಮತ್ತು ಪಶುಸಂಗೋಪನಾ ಇಲಾಖೆ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-21-1629045293

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.