ಶುಕ್ರವಾರ, 11 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಳಗಾವಿ | ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನ: 145 ಕಿ.ಮೀ ಮಾನವ ಸರಪಳಿ

Published : 15 ಸೆಪ್ಟೆಂಬರ್ 2024, 4:17 IST
Last Updated : 15 ಸೆಪ್ಟೆಂಬರ್ 2024, 4:17 IST
ಫಾಲೋ ಮಾಡಿ
Comments

ಬೆಳಗಾವಿ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಜಿಲ್ಲೆಯಲ್ಲಿ ಭಾನುವಾರ 145 ಕಿ.ಮೀ ಮಾನವ ಸರಪಳಿ ನಿರ್ಮಿಸಲಾಗುತ್ತಿದೆ.

ರಾಮದುರ್ಗ ತಾಲ್ಲೂಕಿನ ಸಾಲಹಳ್ಳಿಯಿಂದ ಯರಗಟ್ಟಿ, ಹಲಕಿ ಕ್ರಾಸ್, ನೇಸರಗಿ, ಸಾಂಬ್ರಾ, ಬೆಳಗಾವಿ, ಹಿರೇಬಾಗೇವಾಡಿ, ಎಂ‌.ಕೆ.ಹುಬ್ಬಳ್ಳಿ ಮಾರ್ಗವಾಗಿ ಚನ್ನಮ್ಮನ ಕಿತ್ತೂರಿನವರೆಗೆ ಮಾನವ ಸರಪಳಿ ರಚಿಸಲಾಗುತ್ತಿದೆ.

ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಆಯೋಜಿಸಿದ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಚಾಲನೆ ನೀಡಿದರು. ಜಾನಪದ ಕಲಾತಂಡಗಳ ಪ್ರದರ್ಶನ ಮನಸೆಳೆಯಿತು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ, ಶಾಸಕ ವಿಠ್ಠಲ ಹಲಗೇಕರ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಇತರರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT