ಭಾನುವಾರ, ಫೆಬ್ರವರಿ 23, 2020
19 °C

ಗ್ರಂಥಾಲಯದಲ್ಲಿ ಮಾನವ ಹಕ್ಕುಗಳ ದಿನಾಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ನಗರ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿ ಗ್ರಂಥಾಲಯ ಇಲಾಖೆ, ಚಾಕ್‌ಸ್ಲೇಟ್ ಪ್ರತಿಷ್ಠಾನ ಸಹಯೋಗದಲ್ಲಿ ಮಾನವ ಹಕ್ಕುಗಳ ದಿನಾಚರಣೆ ಅಂಗವಾಗಿ ಸಂವಿಧಾನ ಕುರಿತು ಉಪನ್ಯಾಸ ಕಾರ್ಯಕ್ರಮ ಈಚೆಗೆ ಹಮ್ಮಿಕೊಳ್ಳಲಾಗಿತ್ತು.

ಬೆಳಗಾವಿ ವಕೀಲರ ಸಂಘದ ಕಾರ್ಯದರ್ಶಿ ಆರ್.ಸಿ. ಪಾಟೀಲ ಅವರು ಮಾನವ ಹಕ್ಕುಗಳ ದಿನಾಚರಣೆ ಉದ್ದೇಶ, ಮಹತ್ವ ಹಾಗೂ ಹಕ್ಕುಗಳ ರಕ್ಷಣೆ ಬಗ್ಗೆ ತಿಳಿವಳಿಕೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಗ್ರಂಥಾಲಯ ಇಲಾಖೆ ಉಪನಿರ್ದೇಶಕ ರಾಮಯ್ಯ, ‘ಸಂವಿಧಾನದತ್ತವಾಗಿ ನಮಗೆ ದೊರೆತಿರುವ ಹಕ್ಕು, ಕರ್ತವ್ಯಗಳ ಬಗ್ಗೆ ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಸೂಪರಿಂಟೆಂಡೆಂಟ್‌ ಎ.ಎ.ಕಾಂಬಳೆ, ಸಿಬ್ಬಂದಿ ಸುಮಿತ್ ಕಾವಳೆ, ಶಶಿಕಲಾ ಸೀಮಿಮಠ, ಸುಜಾತಾ, ನೀಲಮ್ಮ ಪಟ್ಟೇದ, ಕಾಂತರಾಜು, ಮೋಹನ ಇದ್ದರು.

ಪ್ರಕಾಶ ಇಚಲಕರಂಜಿ ವಂದಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)