ಗುರುವಾರ , ಜುಲೈ 29, 2021
26 °C

ಪತ್ನಿ ಕೊಲೆ ಆರೋಪ: ಪತಿ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಇಲ್ಲಿನ ಶಹಾಪುರದ ಅಳ್ವನ ಗಲ್ಲಿಯಲ್ಲಿ ಪತ್ನಿ ಕೊಲೆ ಮಾಡಿದ ಆರೋಪದ ಮೇಲೆ ಪತಿಯನ್ನು ಶಹಾಪುರ ಠಾಣೆ ಪೊಲೀಸರು ಭಾನುವಾರ ಬಂಧಿಸಿದ್ದಾರೆ.

ಲಕ್ಷ್ಮೀಕಾಂತ ಯಲ್ಲಾರಿ (23) ಬಂಧಿತ ಆರೋಪಿ.

ತಾಲ್ಲೂಕಿನ ಮುಚ್ಚಂಡಿ ಗ್ರಾಮದ ಜ್ಯೋತಿ ಯಲ್ಲಾರಿ (19) ಮನೆಯಲ್ಲಿ ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದುದು ಶನಿವಾರ ವರದಿಯಾಗಿತ್ತು.

‘ಮಗಳ ಕೊಲೆಯಾಗಿದೆ. ಆಕೆಯ ಪತಿ ಪರಾರಿಯಾಗಿದ್ದಾನೆ’ ಅವರ ಪೋಷಕರು ದೂರು ನೀಡಿದ್ದರು. ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಅವರನ್ನು ಹಿಂಡಲಗಾ ಕಾರಾಗೃಹಕ್ಕೆ ಕಳುಹಿಸಲಾಗಿದೆ. ಜಾತಿನಿಂದನೆ, ಕೊಲೆ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

‘ಈ ಜೋಡಿ ಮೂರು ತಿಂಗಳ ಹಿಂದೆ ಪ್ರೀತಿಸಿ ಅಂತರ್ಜಾತಿ ವಿವಾಹವಾಗಿದ್ದರು. ಕುಟುಂಬದ ಸದಸ್ಯರ ವಿರೋಧದ ಹಿನ್ನೆಲೆಯಲ್ಲಿ ಇಲ್ಲಿ ಬಾಡಿಗೆ ಮನೆಯಲ್ಲಿದ್ದರು ಎಂದು ತಿಳಿದುಬಂದಿದೆ’ ಎಂದು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು