ಮೋಳೆ: ‘ನಾನು ಮಂತ್ರಿ ಸ್ಥಾನ ಕೇಳಿಲ್ಲ. ಕೊಟ್ಟರೆ ತೆಗೆದುಕೊಳ್ಳುತ್ತೇನೆ. ಸಂಪುಟ ವಿಸ್ತರಣೆ ಯಾವಾಗ ಎನ್ನುವುದು ಗೊತ್ತಿಲ್ಲ’ ಎಂದು ಕಾಗವಾಡ ಶಾಸಕ ಶ್ರೀಮಂತ ಪಾಟೀಲ ಹೇಳಿದರು.
ಕಾಗವಾಡ ತಾಲ್ಲೂಕಿನ ಉಗಾರ ಖುರ್ದ ಗ್ರಾಮದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಂಗಳವಾರ ಮಾತನಾಡಿದ ಅವರು, ‘ಕ್ಷೇತ್ರದ ಜನರ ಹಿತಕ್ಕಾಗಿ ದುಡಿಯುತ್ತಿದ್ದೇನೆ. ಸಂಪುಟ ವಿಸ್ತರಣೆ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಸಚಿವನಾಗಬೇಕು ಎನ್ನುವ ಆಸೆ ಇಲ್ಲ’ ಎಂದರು.
‘ಗಡಿಯಲ್ಲಿ ಕೋವಿಡ್ ಹರಡದಂತೆ ನೋಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ’ ಎಂದು ತಿಳಿಸಿದರು.
‘ನೆರೆ ಸಂತ್ರಸ್ತರಿಗೆ ಪರಿಹಾರ ಒದಗಿಸಲಾಗಿದೆ. ನದಿ ತೀರದ ಜನರಿಗೆ ಯಾರಾದರೂ ಅಧಿಕಾರಿಗಳು ತೊಂದರೆ ಮಾಡಿದರೆ ಗಮನಕ್ಕೆ ತರಬೇಕು’ ಎಂದು ಕೋರಿದರು.