ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖಾದಿ ಮಂಡಳಿಗೆ ನೇಮಕ ನಿರೀಕ್ಷಿಸಿರಲಿಲ್ಲ, ಖುಷಿಯಾಗಿದೆ: ದುರ್ಯೋಧನ ಐಹೊಳೆ

Last Updated 27 ಜುಲೈ 2020, 10:16 IST
ಅಕ್ಷರ ಗಾತ್ರ

ಬೆಳಗಾವಿ: ‘ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷನಾಗಿ ನೇಮಕಗೊಂಡಿರುವುದಕ್ಕೆ ಖುಷಿಯಾಗಿದೆ. ನಾನು ಈ ಹುದ್ದೆ ನಿರೀಕ್ಷಿಸಿರಲಿಲ್ಲ’ ಎಂದು ರಾಯಬಾಗದ ಶಾಸಕ ದುರ್ಯೋಧನ ಐಹೊಳೆ ಪ್ರತಿಕ್ರಿಯಿಸಿದರು.

‘ಪ್ರಜಾವಾಣಿ’ಯೊಂದಿಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶ್ರಾವಣ ಸೋಮವಾರದ ದಿನ ಒಳ್ಳೆಯ ಕೊಡುಗೆ ನೀಡಿದ್ದಾರೆ. ಮಂಡಳಿಯಲ್ಲಿ ಕೆಲಸ ಮಾಡಲು ಬಹಳಷ್ಟು ಅವಕಾಶವಿದೆ. ಅದನ್ನು ಬಳಸಿಕೊಳ್ಳುತ್ತೇನೆ’ ಎಂದರು.

‘ಜಿಲ್ಲಾ ನಾಯಕರ ಸಹಕಾರ ಮತ್ತು ರಾಜಕಾರಣದಲ್ಲಿ ನನ್ನ ಗಾಡ್‌ಫಾದರ್‌ ಆಗಿರುವ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಮೊದಲಾದವರ ಸಹಕಾರದಿಂದ ನನಗೆ ಅವಕಾಶ ಸಿಕ್ಕಿದೆ. ಮುಖ್ಯಮಂತ್ರಿಗೆ ಎಷ್ಟು ಧನ್ಯವಾದ ಅರ್ಪಿಸಿದರೂ ಸಾಲದು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT