ಬುಧವಾರ, ಜುಲೈ 28, 2021
23 °C

ಸಂಪುಟ ದರ್ಜೆ ಸ್ಥಾನಮಾನ ನಿರೀಕ್ಷಿಸಿರಲಿಲ್ಲ: ಮಹೇಶ ಕುಮಠಳ್ಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಅಥಣಿ: ‘ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷರನ್ನಾಗಿ ನನ್ನನ್ನು ನೇಮಿಸಿರುವುದಕ್ಕೆ ಸಂತೋಷವಾಗಿದೆ. ಸಂಪುಟ ದರ್ಜೆ ಸ್ಥಾನಮಾನ ದೊರೆಯುತ್ತದೆಂದು ನಿರೀಕ್ಷಿಸಿರಲಿಲ್ಲ. ಅದಕ್ಕಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಆಭಾರಿಯಾಗಿದ್ದೇನೆ’ ಎಂದು ಶಾಸಕ ಮಹೇಶ ಕುಮಠಳ್ಳಿ ತಿಳಿಸಿದರು.

ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ಬುಧವಾರ ಪಟ್ಟಣಕ್ಕೆ ಬಂದ ಅವರು ಬೆಂಬಲಿಗರಿಂದ ಸ್ವಾಗತ ಸ್ವೀಕರಿಸಿ ಮಾತನಾಡಿದರು.

‘ಬಿಜೆಪಿ ಸರ್ಕಾರ ಅವಧಿ ಪೂರ್ಣಗೊಳಿಸಲಿದೆ. ಇದರಲ್ಲಿ ಯಾವುದೇ ಅನುಮಾನವಿಲ್ಲ’ ಎಂದು ಪ್ರತಿಕ್ರಿಯಿಸಿದರು.

‘ಸಚಿವ ಸ್ಥಾನಕ್ಕಿಂತಲೂ ಈ ಹುದ್ದೆ ತೃಪ್ತಿ ತಂದಿದೆ. ಕಸದಿಂದ ರಸ ತೆಗೆದು ತೋರಿಸುತ್ತೇನೆ. ರಾಜ್ಯದ ತುಂಬೆಲ್ಲಾ ಸಂಚರಿಸಿ ಕೆಲಸ ಮಾಡುತ್ತೇನೆ. ನಿಗಮದಿಂದ ಹಲವು ಯೋಜನೆಗಳನ್ನು ರೂಪಿಸುತ್ತೇನೆ’ ಎಂದು ತಿಳಿಸಿದರು.

‘ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹಾಗೂ ನನ್ನ ನಡುವೆ ವೈಮನಸ್ಸು ಇಲ್ಲ’ ಎಂದು ಪ್ರತಿಕ್ರಿಯಿಸಿದರು. 

‘ಅಥಣಿ ಭಾಗಕ್ಕೆ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹಲವು ಯೋಜನೆಗಳನ್ನು ನೀಡಿದ್ದಾರೆ. ಈವರೆಗೆ ₹ 1,200 ಕೋಟಿ ಅನುದಾನ ಮಂಜೂರು ಮಾಡಿದ್ದಾರೆ’ ಎಂದರು.

ಜಿಲ್ಲಾ ಪಂಚಾಯಿತಿ ಸದಸ್ಯ ಗುರಪ್ಪ ದಾಸ್ಯಾಳ, ಬಿಜೆಪಿ ಮಂಡಲ ಅಧ್ಯಕ್ಷ ಶ್ರೀಶೈಲ ನಾಯಿಕ, ಮುಖಂಡರಾದ ಶಿವಾನಂದ ದಿವಾನಮಳ, ಮಲ್ಲಿಕಾರ್ಜುನ ಅಂದಾನಿ, ಅಮೂಲ ನಾಯಿಕ, ನಿಂಗಪ್ಪ ನಂದೇಶ್ವರ, ಪ್ರಕಾಶ ಚನ್ನಣ್ಣವರ, ವಿನಯಗೌಡ ಪಾಟೀಲ, ಅಲಗೊಂಡ ಪಾಟೀಲ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು