ಶನಿವಾರ, ಅಕ್ಟೋಬರ್ 24, 2020
24 °C

ರಾಜಕೀಯದಿಂದ ನಿವೃತ್ತಿಯಾಗಿಲ್ಲ: ಪ್ರಭಾಕರ ಕೋರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ‘ಬೆಳಗಾವಿಯಲ್ಲಿ ಏನೇ ವಿಚಾರ ಬಂದರೂ ನನ್ನ ಹೆಸರು ಕೇಳಿಬರುತ್ತದೆ’.

– ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದೀರಾ ಎಂಬ ಪ್ರಶ್ನೆಗೆ ಕೆಎಲ್‌ಇ ಸಂಸ್ಥೆ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಉತ್ತರಿಸಿದ್ದು ಹೀಗೆ.

ಶನಿವಾರ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್‌ ಕಟೀಲ್ ಅವರನ್ನು ಭೇಟಿಯಾಗಲು ಬಂದಿದ್ದ ಅವರು ಪತ್ರಕರ್ತರೊಂದಿಗೆ ಮಾತನಾಡಿದರು.

‘ಈ ಬಾರಿ ಯುವಕರಿಗೆ ಕೊಟ್ಟರೂ ಸಂತೋಷ. ಯಾರಿಗೆ ಕೊಟ್ಟರೂ ಸಂತೋಷ. ನಾನಿನ್ನೂ ರಾಜಕೀಯದಿಂದ ನಿವೃತ್ತಿಯಾಗಿಲ್ಲ’ ಎಂದರು.

‘ಪಕ್ಷ ನಿರ್ಧರಿಸಿದರೆ ನಾನು ಸ್ಪರ್ಧಿಸಲು ಸಿದ್ಧವಿದ್ದೇನೆ. ಎಲ್ಲವೂ ಪಕ್ಷದ ಹೈಕಮಾಂಡ್‌ಗೆ ಬಿಟ್ಟ ವಿಚಾರ. ವರಿಷ್ಠರ ನಿರ್ಧಾರಕ್ಕೆ ಬದ್ಧವಾಗಿದ್ದೇನೆ’ ಎಂದು ಪ್ರತಿಕ್ರಿಯಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು