ಗುರುವಾರ , ಡಿಸೆಂಬರ್ 5, 2019
19 °C

ಹಣ ಪಡೆದದ್ದು ಸಾಬೀತಾದರೆ ರಾಜಕೀಯ ನಿವೃತ್ತಿ: ಶ್ರೀಮಂತ ಪಾಟೀಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಅಥಣಿ: ‘ನಾನು ಕಾಂಗ್ರೆಸ್‌ ಪಕ್ಷಕ್ಕೆ ರಾಜೀನಾಮೆ ಕೊಟ್ಟಿರಲಿಲ್ಲ. ಆದರೂ ನನ್ನನ್ನು ವಿಧಾನಸಭಾಧ್ಯಕ್ಷರು ಶಾಸಕ ಸ್ಥಾನದಿಂದ ಅನರ್ಹಗೊಳಿಸಿದರು. ನಾನು ಹಣ ತೆಗೆದುಕೊಂಡಿದ್ದೇನೆ ಎಂದು ಕಾಂಗ್ರೆಸ್‌ನವರು ಆರೋಪಿಸುತ್ತಿದ್ದಾರೆ. ನಾನು ಯಾರ ಬಳಿಯಾದರೂ ಹಣ ಪಡೆದಿರುವುದನ್ನು ಸಾಬೀತುಪಡಿಸಿದರೆ ರಾಜಕೀಯ ಬಿಟ್ಟು ಮನೆಯಲ್ಲಿ ಕೂರುತ್ತೇನೆ’ ಎಂದು ಕಾಗವಾಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀಮಂತ ಪಾಟೀಲ ಹೇಳಿದರು.

ಶುಕ್ರವಾರ ಉಪಮುಖ್ಯಮಂತ್ರಿ ಲಕ್ಮಣ ಸವದಿ ಭೇಟಿಯಾದ ನಂತರ ಪತ್ರಕರ್ತರೊಂದಿಗೆ ಅವರು ಮಾತನಾಡಿದರು.

‘ನಾನು ಸ್ವಂತಕ್ಕಾಗಿ ರಾಜಕೀಯ ಮಾಡುತ್ತಿದ್ದೇನೆ ಎಂದು ಕಾಂಗ್ರೆಸ್‌ ಅಭ್ಯರ್ಥಿ ರಾಜು ಕಾಗೆ ಆರೋಪಿಸಿದ್ದಾರೆ. ಆದರೆ, ನಾವು ರೈತರು ಹಾಗೂ ಜನರಿಗೋಸ್ಕರ ರಾಜಕೀಯದಲ್ಲಿದ್ದೇನೆಯೇ ಹೊರತು ಸ್ವಂತಕ್ಕಾಗಿ ಅಲ್ಲ. ನಾವು ರೈತರ ಸೇವೆಗಾಗಿ ಸಕ್ಕರೆ ಕಾರ್ಕಾನೆ ತರೆದಿದ್ದೇವೆ’ ಎಂದು ತಿರುಗೇಟು ನೀಡಿದರು.

‘ಉಪಚುನಾವಣೆಯನ್ನು ಲಕ್ಷ್ಮಣ ಸವದಿ ನೇತೃತ್ವದಲ್ಲಿ ಸಮರ್ಥವಾಗಿ ಎದುರಿಸುತ್ತೇವೆ’ ಎಂದರು.

ಪ್ರತಿಕ್ರಿಯಿಸಿ (+)