ಬೈಲಹೊಂಗಲ: 'ಅಧಿಕಾರಿಗಳ, ಜನಪ್ರತಿನಿಧಿಗಳ, ಸಿಬ್ಬಂದಿಗಳ, ಸಾರ್ವಜನಿಕರ ಸಹಕಾರದಿಂದ ನನ್ನ ಸೇವಾ ಅವಧಿಯಲ್ಲಿ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಎಲ್ಲರ ಪ್ರೀತಿ-ವಿಶ್ವಾಸಕ್ಕೆ ಚಿರಋಣಿಯಾಗಿರುವೆ' ಎಂದು ಪುರಸಭೆ ಸಿಪಾಯಿ ಸೋಮಪ್ಪ ದೊಡವಾಡ ಹೇಳಿದರು.

ಪಟ್ಟಣದ ಶಿವಬಸವ ಕಲ್ಯಾಣ ಮಂಟಪದಲ್ಲಿ ನಡೆದ ಸೇವಾ ನಿವೃತ್ತಿ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಸೋಮಪ್ಪ ದೊಡವಾಡ ಅವರನ್ನು ಶಾಸಕ ಮಹಾಂತೇಶ ಕೌಜಲಗಿ, ಪುರಸಭೆ ಅಧ್ಯಕ್ಷ ವಿಜಯ ಬೋಳಣ್ಣವರ, ಜೆಡಿಎಸ್ ಜಿಲ್ಲಾಧ್ಯಕ್ಷ ಶಂಕರ ಮಾಡಲಗಿ, ರಾಜಶೇಖರ ಮೂಗಿ, ಮಹೇಶ ಬೆಲ್ಲದ ಸೇರಿದಂತೆ ಪುರಸಭೆ ಸದಸ್ಯರು, ಹಿರಿಯರು, ಗಣ್ಯರು, ಪುರಸಭೆ ಮಾಜಿ ಸದಸ್ಯರು, ಜನಪ್ರತಿನಿಧಿಗಳು, ಅಧಿಕಾರಿಗಳು ಸತ್ಕರಿಸಿದರು.

ಪುರಸಭೆ ಮುಖ್ಯಾಧಿಕಾರಿ ವೀರೇಶ ಹಸಬಿ ತಮ್ಮ ಸರ್ಕಾರಿ ವಾಹನವನ್ನು ಸ್ವತಃ ಚಲಾಯಿಸಿ ಸೋಮಪ್ಪ ಅವರನ್ನು ಕಾರ್ಯಕ್ರಮಕ್ಕೆ ಕರೆ ತಂದಿದ್ದು ವಿಶೇಷವಾಗಿತ್ತು. ನೇಗಿನಹಾಳ ಗ್ರಾಮದಲ್ಲಿ ಕಿತ್ತೂರ ಶಾಸಕ ಬಾಬಾಸಾಹೇಬ ಪಾಟೀಲ ಸೋಮಪ್ಪ ದೊಡವಾಡ ಅವರನ್ನು ಸನ್ಮಾನಿಸಿದರು.

ಪುರಸಭೆ ಮುಖ್ಯಾಧಿಕಾರಿ ವೀರೇಶ ಹಸಬಿ, ಪುರಸಭೆ ಉಪಾಧ್ಯಕ್ಷ ಬುಡ್ಡೇಸಾಬ ಶಿರಸಂಗಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಹೇಮಲತಾ ಹಿರೇಮಠ, ಪುರಸಭೆ ಸದಸ್ಯರಾದ ಬಸವರಾಜ ಜನ್ಮಟ್ಟಿ, ಬಾಬು ಕುಡಸೋಮಣ್ಣವರ, ಜಗದೀಶ ಜಂಬಗಿ, ಪ್ರೇಮಕ್ಕಾ ಇಂಚಲ, ಲಕ್ಷ್ಮೀ ಬಡ್ಲಿ, ಉಮಾ ಹೊಸೂರ, ಶಶಿಕಲಾ ಹೊಸಮನಿ, ಶ್ರೀದೇವಿ ದೇವಲಾಪೂರ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು. ಪುರಸಭೆ ಮ್ಯಾನೇಜರ್ ಎಂ.ಐ.ಕುಟ್ರಿ, ರಮೇಶ ಹಿಟ್ಟಣಗಿ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.