ಮಂಗಳವಾರ, ಸೆಪ್ಟೆಂಬರ್ 21, 2021
23 °C

ಸಚಿವ ಸ್ಥಾನ ಸಿಗುವ ವಿಶ್ವಾಸ: ಐಹೊಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನಾಗರಮುನ್ನೋಳಿ (ಬೆಳಗಾವಿ ಜಿಲ್ಲೆ): ‘ನೂತನ ಮಂತ್ರಿ ಮಂಡಲದಲ್ಲಿ ನನಗೆ ಸ್ಥಾನ ಸಿಗುವ ವಿಶ್ವಾಸವಿದೆ’ ಎಂದು ಶಾಸಕ ಡಿ.ಎಂ. ಐಹೊಳೆ ಹೇಳಿದರು.

ಸಮೀಪದ ಬಂಬಲವಾಡ ಗ್ರಾಮದಲ್ಲಿ ಆಶಾ ಕಾರ್ಯಕರ್ತೆಯರು ಹಾಗೂ ಕಾರ್ಮಿಕರಿಗೆ ಕಾರ್ಮಿಕ ಇಲಾಖೆಯಿಂದ ಉಚಿತವಾಗಿ ದಿನಸಿ ಕಿಟ್‌ಗಳನ್ನು ವಿತರಿಸಿ ಅವರು ಮಾತನಾಡಿದರು.

‘ಸಮಾಜದ ಹಿರಿಯರು, ಹಿಂದಿನ ಮಂತ್ರಿ ಮಂಡಲದಲ್ಲಿ ಉಪ ಮುಖ್ಯಮಂತ್ರಿಯಾಗಿದ್ದ ಗೋವಿದ ಕಾರಜೊಳ ಅವರೊಂದಿಗೆ ನನಗೂ ಮಂತ್ರಿ ಸ್ಥಾನ ದೊರೆಯಲಿದೆ. ಸಿಕ್ಕರೆ ನನ್ನ ಕ್ಷೇತ್ರದಲ್ಲಿ ಹೆಚ್ಚಿನ ಅಭಿವೃದ್ಧಿ ಮಾಡಲು ಸಾಧ್ಯವಾಗುತ್ತದೆ. ಒಂದು ವೇಳೆ ನೀಡದಿದ್ದಲ್ಲಿ ಶಾಸಕನಾಗಿ, ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಕೆಲಸ ಮಾಡುವೆ’ ಎಂದರು.

ಹೆಸ್ಕಾಂ ನಿರ್ದೇಶಕ ಮಹೇಶ ಭಾತೆ, ದುಂಡಪ್ಪ ಭೆಂಡವಾಡೆ, ಹಸನ ಸನದಿ, ಸದಾಶಿವ ಘೋರ್ಪಡೆ, ಬರಪ್ಪ ಹುಚ್ಚನ್ನವರ, ಕೆಂ‍ಪಣ್ಣ ಹವಾಟಗೋಳ, ದಸ್ತಗೀರ ಸನದಿ, ಉಸ್ತಾದ ಚರಕಿ, ಆನಂದ ಕುಂದರಗಿ, ಶಿವಾನಂದ ಪಾಟೀಲ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು