ಮಂಗಳವಾರ, ಜನವರಿ 18, 2022
22 °C
ಬೆಳಗಾವಿ ಪರಿಷತ್ ಚುನಾವಣೆ: ಒಂದೇ ವೇದಿಕೆಯಲ್ಲಿ ರಮೇಶ, ಲಖನ್ ಪ್ರತ್ಯೇಕ ಪ್ರಚಾರ!

ಹತ್ತು ದಿನಗಳಲ್ಲಿ ನಾನು ಮತ್ತೆ ಮಂತ್ರಿಯಾಗುತ್ತೇನೆ: ರಮೇಶ ಜಾರಕಿಹೊಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅಥಣಿ (ಬೆಳಗಾವಿ ಜಿಲ್ಲೆ): ‘ಹತ್ತು ದಿನಗಳಲ್ಲಿ ನಾನು ಮತ್ತೆ ಮಂತ್ರಿಯಾಗುತ್ತೇನೆ’ ಎಂದು ಗೋಕಾಕದ ಶಾಸಕ ರಮೇಶ ಜಾರಕಿಹೊಳಿ ಗುರುವಾರ ಹೇಳಿದರು.

ಇಲ್ಲಿ ನಡೆದ ವಿಧಾನಪರಿಷತ್ ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡಿದರು. ‘ಯಾರಿಗೆ ಪ್ರಥಮ ಪ್ರಾಶಸ್ತ್ಯದ ಮತ ಕೊಡಬೇಕು ಎನ್ನುವುದನ್ನು ಇನ್ನೆರಡು ದಿನಗಳಲ್ಲಿ ತಿಳಿಸುವೆ’ ಎಂದು ಅಚ್ಚರಿಯ ಹೇಳಿಕೆ ನೀಡಿದರು.

ಮುಂದುವರಿದು, ‘ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಹಿಂದುಳಿದ ವರ್ಗದ ಅಭ್ಯರ್ಥಿಗೆ ಟಿಕೆಟ್ ಕೊಡಲಿಲ್ಲ. ಹೀಗಾಗಿ, ಕಾಂಗ್ರೆಸ್‌ ಸೋಲಿಸಲು ಪಕ್ಷೇತರ ಅಭ್ಯರ್ಥಿ ಹಾಕಿದ್ದೇನೆ’ ಎಂದರು.

ಕೆಲ ಹೊತ್ತಿನ ಬಳಿಕ, ಪಕ್ಷೇತರ ಅಭ್ಯರ್ಥಿ ಲಖನ್‌ ಜಾರಕಿಹೊಳಿ ಕೂಡ ಇದೇ ವೇದಿಕೆಯಲ್ಲಿ ಮತಯಾಚಿಸಿದರು. ಬಿಜೆಪಿ ಮುಖಂಡರು ಕೂಡ ಭಾಗವಹಿಸಿದ್ದರು! ಲಖನ್‌ಗೆ ಮತ ಕೇಳಿದರು.

‘ಲಖನ್‌ಗೆ ಬೆಂಬಲ: ಪಕ್ಷ ಗಮನಿಸುತ್ತಿದೆ’
ಬೆಳಗಾವಿ: ‘ವಿಧಾನಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ‌ ಅವರಿಗೆ ಗೋಕಾಕ ಶಾಸಕ ರಮೇಶ ಜಾರಕಿಹೊಳಿ‌ ಬೆಂಬಲ ನೀಡುತ್ತಿದ್ದಾರೆಯೋ, ಇಲ್ಲವೋ ಎನ್ನುವುದನ್ನು ಪಕ್ಷ ಸೂಕ್ಷ್ಮವಾಗಿ ಗಮನಿಸುತ್ತಿದೆ’ ಎಂದು ವಿಧಾನಪರಿಷತ್ ಸದಸ್ಯ ಲಕ್ಷ್ಮಣ ಸವದಿ ಹೇಳಿದರು.

ಜಿಲ್ಲೆಯ ಕಾಗವಾಡ ತಾಲ್ಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ಪತ್ರಕರ್ತರೊಂದಿಗೆ ಗುರುವಾರ ಮಾತನಾಡಿದರು.

‘ನಮ್ಮದು ರಾಷ್ಟ್ರೀಯ ಪಕ್ಷ. ಯಾರು ಯಾರ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ ಎನ್ನುವುದನ್ನು ಮುಖಂಡರು ಅವಲೋಕಿಸುತ್ತಾರೆ’ ಎಂದು ಪ್ರತಿಕ್ರಿಯಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು