ಬೆಳಗಾವಿ: ‘ಇಲ್ಲಿನ ಕೌಟುಂಬಿಕ ನ್ಯಾಯಾಲಯದಲ್ಲಿ ಸಲ್ಲಿಸಿರುವ ವಿವಾಹ ವಿಚ್ಛೇದನ ಅರ್ಜಿಯನ್ನು ಹಿಂಪಡೆಯುತ್ತೇನೆ. ಈ ನಿಟ್ಟಿನಲ್ಲಿ ಅಗತ್ಯ ಪ್ರಕ್ರಿಯೆ ಆರಂಭಿಸಿದ್ದೇನೆ’ ಎಂದು ಚಲನಚಿತ್ರ ಗೀತರಚನೆಕಾರ ಕೆ.ಕಲ್ಯಾಣ್ ಪತ್ನಿ ಅಶ್ವಿನಿ ತಿಳಿಸಿದರು.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಸೋಮವಾರ ಮಾತನಾಡಿದ ಅವರು, ‘ಪತಿಯನ್ನು ಸದ್ಯದಲ್ಲೇ ಭೇಟಿಯಾಗುತ್ತೇನೆ. ಅವರೊಂದಿಗೆ ದಾಂಪತ್ಯ ಜೀವನ ಮುಂದುವರಿಸುತ್ತೇನೆ. ಗೊಂದಲ, ಸಮಸ್ಯೆಗಳೇನೇ ಇದ್ದರೂನಾವಿಬ್ಬರೂ ಚರ್ಚಿಸಿ ಬಗೆಹರಿಸಿಕೊಳ್ಳುತ್ತೇವೆ’ ಎಂದು ಹೇಳಿದರು.

‘ಯಾವುದೋ ಕೆಟ್ಟ ಘಳಿಗೆಯಿಂದ ಇಷ್ಟೆಲ್ಲ ಅವಾಂತರ ಸೃಷ್ಟಿಯಾಗಿದೆ. ನಮ್ಮ ಕುಟುಂಬ ಯಾವುದೋ ಸುಳಿಯಲ್ಲಿ ಸಿಲುಕಿಕೊಂಡಿತ್ತು. ಗಂಗಾ ಕುಲಕರ್ಣಿ ಹಾಗೂ ಶಿವಾನಂದ ವಾಲಿ ನಮ್ಮನ್ನು ವಶೀಕರಣ ಮಾಡಿಕೊಂಡಿದ್ದರು. ನನ್ನ, ತಂದೆ ಹಾಗೂ ತಾಯಿಯ ಆಸ್ತಿ ಬರೆಸಿಕೊಂಡಿದ್ದರು. ಪ್ರಾಣ ಉಳಿಸಿಕೊಳ್ಳಲು ಪೂಜೆ ಮಾಡಿಸಬೇಕು ಎಂದು ಅವರಿಬ್ಬರೂ ಹೇಳಿದ್ದರು. ಅವರಿಗೆ ಪೂಜೆಗೆಂದು ಹಣ ಕೊಡುತ್ತಿದ್ದೆವು. ಆದರೆ, ನಾವು ಪಾಲ್ಗೊಳ್ಳುತ್ತಿರಲಿಲ್ಲ. ಅದೆಂತಹ ಪೂಜೆ ಮಾಡುತ್ತಿದ್ದರೋ ಗೊತ್ತಿಲ್ಲ. ಈಗ ಅದೆಲ್ಲದರಿಂದ ಸಂಪೂರ್ಣವಾಗಿ ಹೊರಬಂದಿದ್ದೇವೆ’ ಎಂದರು.

‘ಬೆಳಗಾವಿ ಪೊಲೀಸರು ಪರಿಸ್ಥಿತಿಯನ್ನು ಚೆನ್ನಾಗಿ ಮನವರಿಕೆ ಮಾಡಿಕೊಟ್ಟಿದ್ದಾರೆ. ದೇವರ ರೂಪದಲ್ಲಿ ಬಂದು ಕಾಪಾಡಿದ್ದಾರೆ. ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಕಾನೂನಿನಿಂದ ನಮಗೆ ಸಹಾಯ ದೊರೆತಿದೆ. ಯಾರನ್ನಾದರೂ ಮನೆಗೆಲಸಕ್ಕೆ ಸೇರಿಸಿಕೊಳ್ಳುವ ಮುನ್ನ ಅವರ ಬಗ್ಗೆ ಮಾಹಿತಿ ಸಂಗ್ರಹಿಸಿ ಮುಂದುವರಿಯಬೇಕು’ ಎಂದು ಸಲಹೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.