ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾನು ಕೋರ್ಟ್‌ ಮೊರೆ ಹೋಗುವುದಿಲ್ಲ; ಶ್ರೀಮಂತ

Last Updated 8 ಮಾರ್ಚ್ 2021, 14:53 IST
ಅಕ್ಷರ ಗಾತ್ರ

ಅಥಣಿ: ‘ಮಾನಹಾನಿ ಆಗುವ ವಿಷಯ ಪ್ರಸಾರ ಮಾಡದಂತೆ ಆರು ಸಚಿವರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ನಾನು ಯಾವುದೇ ಕೋರ್ಟ್‌ಗೆ ಹೋಗುವುದಿಲ್ಲ’ ಎಂದು ಜವಳಿ ಸಚಿವ ಶ್ರೀಮಂತ ಪಾಟೀಲ ತಿಳಿಸಿದರು.

ತಾಲ್ಲೂಕಿನ ಸಂಬರಗಿ ಗ್ರಾಮದಲ್ಲಿ ₹ 2 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸೋಮವಾರ ಭೂಮಿಪೂಜೆ ನೆರವೇರಿಸಿದ ಬಳಿಕ ಪತ್ರಕರ್ತರೊಂದಿಗೆ ಅವರು ಮಾತನಾಡಿದರು.

‘ಕೆಲವರು ದುರುದ್ದೇಶ ಇಟ್ಟುಕೊಂಡು ಷಡ್ಯಂತ್ರ ಮಾಡುತ್ತಿದ್ದಾರೆ. ಮುಂದೆ ನಮ್ಮ ಬಗ್ಗೆಯೂ ಸುಳ್ಳು ಆರೋಪ ಹಾಗೂ ವದಂತಿಗಳನ್ನು ಹಬ್ಬಿಸಬಹುದು ಎಂದು ಮುಂಜಾಗ್ರತಾ ಕ್ರಮವಾಗಿ ಸಚಿವರು ನ್ಯಾಯಾಲಯಕ್ಕೆ ಹೋಗಿದ್ದಾರೆ. ನನಗೇನೂ ಹೆದರಿಕೆ ಇಲ್ಲ’ ಎಂದರು.

‘ಸಿ.ಡಿ. ನಕಲಿ ಎಂದು ರಮೇಶ ಜಾರಕಿಹೊಳಿ ಸ್ಪಷ್ಟವಾಗಿ ಹೇಳಿದ್ದಾರೆ. ಅವರು ಆದಷ್ಟು ಬೇಗ ಆರೋಪದಿಂದ ಮುಕ್ತರಾಗಿ ಬರುತ್ತಾರೆ. ಅವರಿಂದ ತೆರವಾದ ಸಚಿವ ಸ್ಥಾನವನ್ನು ವರಿಷ್ಠರು ಯಾರಿಗೆ ಕೊಡುತ್ತಾರೆಯೋ ಕಾದು ನೋಡಬೇಕು. ಆದಷ್ಟು ಬೇಗ ಮುಕ್ತರಾದರೆ ಅವರೇ ಸಚಿವ ಸ್ಥಾನ ಪಡೆಯುತ್ತಾರೆ’ ಎಂದು ಹೇಳಿದರು.

ಗಡಿ ಉಸ್ತುವಾರಿ ಸಚಿವರ ನೇಮಕ ನನೆಗುದಿಗೆ ಬಿದ್ದಿರುವ ಪ್ರಶ್ನೆಗೆ, ‘ನಾವೇನು ಪಾಕಿಸ್ತಾನ ಅಥವಾ ಚೀನಾ ಗಡಿಯಲ್ಲಿದ್ದೇವೆಯೇ? ನಾವೂ ಗಡಿಯಲ್ಲೆ ಇದ್ದೇವೆ. ಪ್ರತ್ಯೇಕ ಸಚಿವರ ಅಗತ್ಯವಿಲ್ಲ’ ಎಂದು ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT