ಬುಧವಾರ, ಆಗಸ್ಟ್ 21, 2019
28 °C

ಬಿಜೆಪಿ ತೊರೆಯುವ ಪ್ರಶ್ನೆಯೇ ಇಲ್ಲ: ಕಾಗೆ

Published:
Updated:
Prajavani

ಮೋಳೆ: ‘‌ನಾನು ಬಿಜೆಪಿ ತೊರೆಯುವ ಪ್ರಶ್ನೆಯೇ ಇಲ್ಲ. ಉಹಾಪೋಹಗಳಿಗೆ ಕಾರ್ಯಕರ್ತರು ಕಿವಿ ಕೊಡಬಾರದು’ ಎಂದು ಬಿಜೆಪಿ ಮುಖಂಡ ಭರಮಗೌಡ (ರಾಜು) ಕಾಗೆ ಸ್ಪಷ್ಟಪಡಿಸಿದರು.

ಶುಕ್ರವಾರ ಉಗಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಾನು ಕಾಂಗ್ರೆಸ್ ಸೇರುವುದಾಗಿ ಹಬ್ಬಿಸಲಾಗುತ್ತಿದೆ. ಇದು ಸತ್ಯಕ್ಕೆ ದೂರಾದುದು. ನಾನು ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತ. 4 ಬಾರಿ ಶಾಸಕನಾಗಿ ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆ. ಪಕ್ಷದ ಕಾರ್ಯಕರ್ತರು ಹಾಗೂ ನಾಯಕರು ನನ್ನ ಬೆನ್ನಿಗಿದ್ದಾರೆ. ವದಂತಿಗಳಿಂದ ನೋವಾಗಿದೆ’ ಎಂದರು.

ಅನರ್ಹಗೊಂಡಿರುವ ‌ಕಾಗವಾಡದ ಶಾಸಕ ಶ್ರೀಮಂತ ಪಾಟೀಲ ಬಿಜೆಪಿ ಬರಲಿದ್ದಾರೆ ಎಂಬ ಸುದ್ದಿಗಳಿರುವ ಕುರಿತು ಪ್ರತಿಕ್ರಿಯಿಸಿದ ಅವರು, ‘ನನ್ನನ್ನು ನಂಬಿ 60ಸಾವಿರ ಕಾರ್ಯಕರ್ತರಿದ್ದಾರೆ. ಉಪಚುನಾವಣೆ ಬಂದರೆ ನಾನು ಬಿಜೆಪಿಯಿಂದಲೇ ಸ್ಪರ್ಧಿಸುತ್ತೇನೆ. ಇದರಲ್ಲಿ ಅನುಮಾನ ಬೇಡ’ ಎಂದು ತಿಳಿಸಿದರು.

Post Comments (+)