ಶನಿವಾರ, ಜನವರಿ 18, 2020
27 °C

ನಾನು ಕುಮಾರಸ್ವಾಮಿಯನ್ನು ಟೀಕಿಸುವುದಿಲ್ಲ: ಬಿಎಸ್‌ವೈ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅಥಣಿ (ಬೆಳಗಾವಿ ಜಿಲ್ಲೆ): ‘ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಬಗ್ಗೆ ನಾನು ಟೀಕೆ ಮಾಡುವುದಿಲ್ಲ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಇಲ್ಲಿ ಭಾನುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಯಾರ ಸಹಕಾರ, ಬೆಂಬಲವೂ ಇಲ್ಲದೇ ನಾವು‌ ಅಧಿಕಾರ ನಡೆಸುತ್ತೇವೆ’ ಎಂದರು.

ಯಡಿಯೂರಪ್ಪ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದರು ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಸಿದ್ದರಾಮಯ್ಯ ಯಾವ ಬಾಗಿಲಿನಿಂದ ಅಧಿಕಾರಕ್ಕೆ ಬಂದಿದ್ದರು, ಅವರಿಗೆ ಬಹುಮತ ಇತ್ತಾ, ಜೆಡಿಎಸ್ ಜೊತೆಗೆ ಹೋಗಿದ್ದೇಕೆ?’ ಎಂದು ಕೇಳಿದರು.

‘ಒಗ್ಗಟ್ಟಾಗಿದ್ದ ಕಾಂಗ್ರೆಸ್‌ ಅನ್ನು ಸಿದ್ದರಾಮಯ್ಯ ಒಡೆದ ಮನೆಯಾಗಿ ಮಾಡಿದ್ದಾರೆ. ಅವರೊಂದಿಗೆ ಮಲ್ಲಿಕಾರ್ಜುನ ಖರ್ಗೆ, ಡಾ.ಜಿ. ಪರಮೇಶ್ವರ ಮೊದಲಾದವರು ಪ್ರಚಾರಕ್ಕೆ ಬರುತ್ತಿಲ್ಲವೇಕೆ?’ ಎಂದು ಕೇಳಿದರು.

ಉಪ ಚುನಾವಣೆಯಲ್ಲಿ ಮಂಡ್ಯ ಸಂಸದೆ ಸುಮಲತಾ ತಟಸ್ಥವಾಗಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಸುಮಲತಾ ನಮ್ಮ ಸಂಪರ್ಕಕ್ಕೆ ಸಿಕ್ಕಿಲ್ಲ, ಅವರೊಂದಿಗೆ ಮಾತನಾಡುವೆ’ ಎಂದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು