ಭಾನುವಾರ, ಅಕ್ಟೋಬರ್ 25, 2020
28 °C

ಅಂಗಡಿ ಕುಟುಂಬದವರಿಗೆ ರಮೇಶ ಸಾಂತ್ವನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಇಲ್ಲಿನ ವಿಶ್ವೇಶ್ವರಯ್ಯ ನಗರದ ಸಂಪಿಗೆ ರಸ್ತೆಯಲ್ಲಿರುವ ದಿ.ಸುರೇಶ ಅಂಗಡಿ ಅವರ ಕುಟುಂಬದವರಿಗೆ ಶುಕ್ರವಾರ ಸಾಂತ್ವನ ಹೇಳಿದರು.

ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಸುರೇಶ ಅಂಗಡಿ, ಜಗದೀಶ ಶೆಟ್ಟರ್‌ ಹಾಗೂ ನಾನು ಒಂದು ಶಕ್ತಿಯಾಗಿದ್ದೆವು. ಅಂಗಡಿ ಅವರ ಪತ್ನಿ ಮಂಗಳಾ ಗೋಕಾಕದ ನಮ್ಮ ಮನೆಯಲ್ಲಿ ಬೆಳೆದವರು. ನನಗೆ ಸಹೋದರಿಗಿಂತಲೂ ಜಾಸ್ತಿ ಇದ್ದಾರೆ. ಅವರಿಗೆ ಧೈರ್ಯ ತುಂಬಿದ್ದೇನೆ. ಅವರಿಗೆ ಮುಂದಿನ ದಿನಗಳಲ್ಲಿ ಎಲ್ಲ ರೀತಿಯಲ್ಲೂ ನೆರವಾಗುತ್ತೇನೆ’ ಎಂದು ತಿಳಿಸಿದರು.

‘ಅಂಗಡಿ ಅವರು ರಾಜಕೀಯದಲ್ಲಿ ಇನ್ನೂ ಉನ್ನತ ಸ್ಥಾನಕ್ಕೆ ಹೋಗುತ್ತಿದ್ದರು. ದೇವರು ಅವಕಾಶ ಕೊಡಲಿಲ್ಲ. ಅವರ ಅಗಲಿಕೆಯಿಂದ ನನಗೆ ವೈಯಕ್ತಿಕವಾಗಿ ದೊಡ್ಡ ನಷ್ಟ ಉಂಟಾಗಿದೆ. ಜಿಲ್ಲೆಯೂ ಬಡವಾಗಿದೆ. ಚುನಾವಣೆಯಲ್ಲಿ ಅಂಗಡಿ ವಿರುದ್ಧ ಕೆಲಸ ಮಾಡಲು ಕಾಂಗ್ರೆಸ್‌ನವರೂ ಮುಂದಾಗುತ್ತಿರಲಿಲ್ಲ. ಆ ರೀತಿಯ ಒಳ್ಳೆಯ ಒಡನಾಡವನ್ನು ಸುರೇಶ ಹೊಂದಿದ್ದರು’ ಎಂದರು.

ಅಂಗಡಿ ಅವರನ್ನು ಮುಖ್ಯಮಂತ್ರಿ ಮಾಡಲು ಚರ್ಚೆ ನಡೆದಿತ್ತೆ ಎಂಬ ಪ್ರಶ್ನೆಗೆ, ‘ಆ ಬಗ್ಗೆ ಈಗ ಚರ್ಚೆ ಬೇಡ. ಮುಂದಿನ ದಿನಗಳಲ್ಲಿ ಹೇಳುತ್ತೇನೆ’ ಪ್ರತಿಕ್ರಿಯಿಸಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ಪಾಟೀಲ, ಮುಖಂಡ ಕಿರಣ್ ಜಾಧವ್ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.