ಸೋಮವಾರ, ಜುಲೈ 26, 2021
21 °C

‘ರೈತರ ಸಮಸ್ಯೆಗಳ ಪರಿಹಾರಕ್ಕೆ ಕ್ರಮ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೌಜಲಗಿ: ‘ಪ್ರಧಾನಿ ನರೇಂದ್ರ ಮೋದಿ ಅವರು ರೈತರ ಆದಾಯ ದ್ವಿಗುಣಗೊಳಿಸಲು ಮುಂದಾಗಿದ್ದಾರೆ. ಇದೂ ಸೇರಿದಂತೆ ಕೃಷಿಕರ ಪರವಾದ ಎಲ್ಲ ಯೋಜನೆಗಳನ್ನು ರಾಜ್ಯದಲ್ಲಿ ಅನುಷ್ಠಾನಕ್ಕೆ ತರಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ’ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.

ಸಮೀಪದ ಬೆಟಗೇರಿ ಗ್ರಾಮದ ಮಹಾಲಕ್ಷ್ಮಿ ಸೌಹಾರ್ದ ಸಹಕಾರಿ ಶಾಖೆಗೆ ಸೋಮವಾರ ಭೇಟಿ ನೀಡಿದ್ದ ವೇಳೆ ಸಲಹಾ ಸಮಿತಿಯವರಿಂದ ಸತ್ಕಾರ ಸ್ವೀಕರಿಸಿ ಅವರು ಮಾತನಾಡಿದರು.

‘ಸಾಮಾನ್ಯ ರೈತ ಕುಟುಂಬದಿಂದ ಬಂದಿರುವ ನಾನು, ರೈತರ ಸಮಸ್ಯೆಗಳ ಕುರಿತು ಕೇಂದ್ರ ಸರ್ಕಾರದ ಗಮನಸೆಳೆಯುವ ಕೆಲಸ ಮಾಡುತ್ತೇನೆ’ ಎಂದರು.

ಸಮಿತಿಯ ಅಧ್ಯಕ್ಷ ಈರಪ್ಪ ದೇಯಣ್ಣವರ, ಶ್ರೀಕಾಂತ ಕರೆಪ್ಪಗೋಳ, ಮಾಯಪ್ಪ ಬಾಣಸಿ, ರಾಮಪ್ಪ ಮುಧೋಳ, ರಮೇಶ ಬ್ಯಾಗಿ, ವಿಠಲ ಕೋಣಿ, ಈಶ್ವರ ಮುಧೋಳ, ಪರಪ್ಪ ಗಿರೆಣ್ಣವರ, ಮಹಾದೇವ ಇಟ್ನಾಳ, ಗಂಗಯ್ಯ ಹಿರೇಮಠ ಇದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.