ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಸಿಕೆ ಪಡೆಯದಿದ್ದರೆ ಸೌಲಭ್ಯ ಬಂದ್: ಪಿಡಿಒ

Last Updated 22 ಜೂನ್ 2021, 7:19 IST
ಅಕ್ಷರ ಗಾತ್ರ

ತೆಲಸಂಗ (ಬೆಳಗಾವಿ ಜಿಲ್ಲೆ): ಕೋವಿಡ್ ಲಸಿಕೆಯನ್ನು ಉಚಿತವಾಗಿ ನೀಡಲಾಗುತ್ತಿದ್ದು, ಪಡೆಯದವರು ಮತ್ತು ಸುಳ್ಳು ಸುದ್ದಿಗಳನ್ನು ಹರಿಬಿಡುವವರ ಪಡಿತರ ಚೀಟಿ ಸೇರಿದಂತೆ ಸರ್ಕಾರಿ ಸೌಲಭ್ಯ ಬಂದ್ ಮಾಡಲಾಗುವುದು’ ಎಂದು ಪಿಡಿಒ ಬೀರಪ್ಪ ಕಡಗಂಚಿ ಎಚ್ಚರಿಕೆ ನೀಡಿದರು.

ಇಲ್ಲಿ ಸೋಮವಾರ ಕೋವಿಡ್ ಲಸಿಕಾ ಮೇಳಕ್ಕೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು.

‘ಕೋವಿಡ್ ಲಸಿಕೆ ಪಡೆಯುವುದರಿಂದ ತೊಂದರೆ ಆಗುತ್ತದೆ ಎಂಬ ಸುಳ್ಳು ಸುದ್ದಿಗಳನ್ನು ಕೆಲವರು ಹರಿಬಿಡುತ್ತಿದ್ದಾರೆ. ಅಂಥವರ ಸುಳಿವು ಸಿಕ್ಕಲ್ಲಿ ಅವರ ವಿರುದ್ಧ ಕ್ರಮಿನಲ್ ಪ್ರಕರಣ ದಾಖಲಿಸಲಾಗುವುದು. ಲಸಿಕೆ ಪಡೆಯದವರಿಗೆ ಗ್ರಾಮ ಪಂಚಾಯ್ತಿಯಿಂದ ಯಾವುದೇ ದಾಖಲಾತಿ ನೀಡುವುದಿಲ್ಲ. ಸವಲತ್ತನ್ನೂ ನಿಲ್ಲಿಸಲಾಗುವುದು’ ಎಂದರು.

ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಸಹಾಯಕ ವಿನೋದ ಪಾಟೀಲ ಮಾತನಾಡಿದರು. ಗ್ರಾಮ ಲೆಕ್ಕಾಧಿಕಾರಿ ಬಿ.ಜಿ. ಇರಕಾರ, ಗೀತಾ, ಗ್ರಾ.ಪಂ. ಸದಸ್ಯ ಸಿದ್ದಲಿಂಗ ಮಾದರ, ಸಿದ್ದು ಕೋಡ್ನಿ, ಸುರೇಶ ಖೊಳಂಬಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT