ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋಳೆ: ಅನಧಿಕೃತ ಡಬ್ಬಾ ಅಂಗಡಿಗಳ ತೆರವು

Last Updated 7 ಫೆಬ್ರುವರಿ 2020, 15:06 IST
ಅಕ್ಷರ ಗಾತ್ರ

ಮೋಳೆ: ಕಾಗವಾಡ ತಾಲ್ಲೂಕಿನ ಉಗಾರ ಖುರ್ದನಲ್ಲಿ ರಸ್ತೆ ಬದಿಯಲ್ಲಿದ್ದ 70ಕ್ಕೂ ಹೆಚ್ಚು ಡಬ್ಬಾ ಅಂಗಡಿಗಳನ್ನು ಪೊಲೀಸ್‌ ಬಂದೋಬಸ್ತ್‌ನಲ್ಲಿ ಶುಕ್ರವಾರ ತೆರವುಗೊಳಿಸಲಾಯಿತು.

‘ನ್ಯಾಯಾಲಯದ ಆದೇಶದ ಮೇರೆಗೆ ಡಬ್ಬಾ ಅಂಗಡಿಗಳನ್ನು ತೆರವುಗೊಳಿಸಲಾಗುತ್ತಿದೆ. ಅಂಗಡಿ ಕಳೆದುಕೊಂಡು ಸಂತ್ರಸ್ತರಾದವರಿಗೆ ಪರ್ಯಾಯ ವ್ಯವಸ್ಥೆ ಮಾಡಲಾಗುವುದು.ರಸ್ತೆ ಅಗಲೀಕರಣ ಮಾಡಲು ಇಲಾಖೆಯಿಂದ ಅನುದಾನ ಮಂಜೂರಾಗಿದ್ದು, ಸದ್ಯದಲ್ಲಿಯೇ ಕಾಮಗಾರಿ ಪ್ರಾರಂಭಿಸಲಾಗುವುದು’ ಎಂದು ತಹಶೀಲ್ದಾರ್‌ ಪ್ರಮೀಳಾ ದೇಶಪಾಂಡೆ ಹೇಳಿದರು.

ಪುರಸಭೆ ಮುಖ್ಯಾಧಿಕಾರಿ ಕಮಲವ್ವ ಭಾಗೋಜಿ ಮಾತನಾಡಿ, ‘ರಸ್ತೆ ಅಗಲೀಕರಣಕ್ಕಾಗಿ ಅಂಗಡಿಗಳನ್ನು ತೆರವುಗೊಳಿಸುವುದು ಅನಿವಾರ್ಯವಾಗಿತ್ತು’ ಎಂದರು.

‘ಡಬ್ಬಾ ಅಂಗಡಿಗಳ ಮೇಲೆಯೇ ಬದುಕು ನಡೆಸುತ್ತಿದ್ದ ಬಡ ಕುಟುಂಬಗಳಿಗೆ ಸರ್ಕಾರ ಪರ್ಯಾಯ ವ್ಯವಸ್ಥೆ ಮಾಡಬೇಕು’ ಎಂದು ಅಂಗಡಿಗಳ ಮಾಲೀಕರು ಮನವಿ ಮಾಡಿಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT