ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀತಿಸಂಹಿತೆ ಪಾಲನೆಗೆ ಮುಂಜಾಗ್ರತಾ ಕ್ರಮ: ಜಿಲ್ಲಾಧಿಕಾರಿ ಹಿರೇಮಠ

ಅಧಿಕಾರಿಗಳಿಗೆ ಚುನಾವಣಾ ತರಬೇತಿಯಲ್ಲಿ ಜಿಲ್ಲಾಧಿಕಾರಿ ಹಿರೇಮಠ
Last Updated 4 ಮಾರ್ಚ್ 2021, 15:49 IST
ಅಕ್ಷರ ಗಾತ್ರ

ಬೆಳಗಾವಿ: ‘ಮುಂಬರುವ ಲೋಕಸಭಾ ಉಪ ಚುನಾವಣೆ ಸಂದರ್ಭದಲ್ಲಿ ನೀತಿಸಂಹಿತೆ ನಿಯಮಗಳು ಉಲ್ಲಂಘನೆ ಆಗದಂತೆ ಮುಂಜಾಗ್ರತಾ ಕ್ರಮ ವಹಿಸಬೇಕು’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ದಕ್ಷಿಣ ಹಾಗೂ ಗ್ರಾಮೀಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಚುನಾವಣಾ ಕಾರ್ಯಕ್ಕೆ ನಿಯೋಜಿತರಾದ ಅಧಿಕಾರಿಗಳು ಹಾಗೂ ವಿವಿಧ ತಂಡಗಳಿಗೆನಗರದ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಮತದಾನ ಕೇಂದ್ರದಲ್ಲಿರುವ ಕುಡಿಯುವ ನೀರಿನ ವ್ಯವಸ್ಥೆ, ವಾತಾವರಣ, ವಸತಿ ವ್ಯವಸ್ಥೆಗಳ ಬಗ್ಗೆ ಪ್ರಾಥಮಿಕ ಹಂತದ ವರದಿ ಸಲ್ಲಿಸಬೇಕು. ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ತಿಳಿಸಿ, ಮತದಾನ ಕೇಂದ್ರಗಳಿಗೆ ಸಂಬಂಧಿಸಿದಂತೆ ಕುಂದು ಕೊರತೆಗಳನ್ನು ಸರಿಪಡಿಸಿಕೊಳ್ಳಬೇಕು’ ಎಂದು ಚುನಾವಣಾ ತರಬೇತುದಾರ ರವಿ ಕರಲಿಂಗಣ್ಣವರ ಸೂಚಿಸಿದರು.

‘ಮತಗಟ್ಟೆಗಳಲ್ಲಿ ಇಂಟರ್ನೆಟ್‌ ಲಭ್ಯತೆ ಬಗ್ಗೆ ಗಮನಹರಿಸಬೇಕು.ಸಾರಿಗೆ ವ್ಯವಸ್ಥೆ ಇದೆಯೇ ಎನ್ನುವುದನ್ನು ಪರಿಶೀಲಿಸಬೇಕು. ಮತದಾರರ ಪಟ್ಟಿಯನ್ನು ಮುಂಚಿತವಾಗಿ ಸಿದ್ಧಪಡಿಸಿಟ್ಟುಕೊಳ್ಳಬೇಕು. ವಿದ್ಯುನ್ಮಾನ ಮತಯಂತ್ರ ಬಳಸಿ, ಮತ ಚಲಾಯಿಸುವ ಕುರಿತು ಮತದಾರರಿಗೆ ಪ್ರಾತ್ಯಕ್ಷಿಕೆ ತೋರಿಸಬೇಕು’ ಎಂದರು.

‘ನೀತಿಸಂಹಿತೆ ಜಾರಿ ನಂತರ ಕ್ಷೇತ್ರದಲ್ಲಿ ಯಾವುದೇ ರೀತಿಯ ಕಾರ್ಯಕ್ರಮಗಳು, ಸಭೆಗಳು ಜರುಗದಂತೆ ನೋಡಿಕೊಳ್ಳಬೇಕು. ದಿನಾಂಕ ನಿಗದಿಯಾದ ನಂತರ 4 ದಿನ ಮುಂಚಿತವಾಗಿ ಮತದಾನಕ್ಕೆ ಬೇಕಾಗಿರುವ ಎಲ್ಲ ಪರಿಕರಗಳ ವ್ಯವಸ್ಥೆಯ ಕುರಿತು ವರದಿ ಸಲ್ಲಿಸಬೇಕು. ವಲಯ ಚುನಾವಣಾ ಅಧಿಕಾರಿಗಳು ಸಂಬಂಧಿಸಿದಂತೆ ಪೊಲೀಸ್ ಇಲಾಖೆ, ಮಾನವ ಸಂಪನ್ಮೂಲ ಇಲಾಖೆಗಳ ಜೊತೆ ಸಹಕರಿಸಬೇಕು’ ಎಂದು ಸೂಚಿಸಿದರು.

‘ಫ್ಲೈಯಿಂಗ್ ಸ್ಕ್ವಾಡ್‌ಗಳು ಚುನಾವಣೆ ಸಮಯದಲ್ಲಿ ಮತ ಪಡೆಯಲು ನೀಡುವ ಆಮಿಷಗಳಾದ ಹಣ, ವಸ್ತುಗಳನ್ನು ವಶಪಡಿಸಿಕೊಂಡು ದೂರು ದಾಖಲಿಸಬೇಕು. ಸ್ಟ್ಯಾಟಿಕ್‌ ಸರ್ವೇಲನ್ಸ್ ಟೀಮ್ (ಸ್ಥಾನಿಕ ನಿಗ್ರಹ ದಳ) ಎಲ್ಲ ಚೆಕ್‌ಪೋಸ್ಟ್‌ಗಳ ಮೇಲೆ ಕಣ್ಗಾವಲು ಇಟ್ಟಿರಬೇಕು’ ಎಂದರು.

ಚುನಾವಣಾ ತರಬೇತುದಾರ ಎನ್.ವಿ. ಶಿರಗಾಂವಕರ, ನೋಡಲ್ ಅಧಿಕಾರಿಗಳಾದ ಪ್ರೀತಂ ನಸಲಾಪುರೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT