ಬೆಳಗಾವಿ: ಮಾಹಿತಿ ಆಯೋಗದ ಬೆಳಗಾವಿ ಪೀಠದ ಕಚೇರಿಯನ್ನು ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಆರಂಭಿಸಲಾಗಿದೆ.

ಇದರೊಂದಿಗೆ, ವಿವಿಧ ಇಲಾಖೆಗಳ ರಾಜ್ಯಮಟ್ಟದ ಕಚೇರಿಗಳನ್ನು ಸುವರ್ಣ ವಿಧಾನಸೌಧಕ್ಕೆ ಸ್ಥಳಾಂತರಿಸಬೇಕು ಎಂಬ ಉತ್ತರ ಕರ್ನಾಟಕದ ಜನರ ಬಹುದಿನಗಳ ಬೇಡಿಕೆಗೆ ಸ್ಪಂದನೆ ದೊರೆತಿದೆ. ಸರ್ಕಾರದ ಆಶಯದಂತೆ ಪೀಠವು ಕಾರ್ಯಾರಂಭ ಮಾಡಿದೆ.

ಈ ಕುರಿತು ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿದ ಕರ್ನಾಟಕ ಮಾಹಿತಿ ಆಯೋಗದ ಆಯುಕ್ತೆ ಬಿ.ವಿ. ಗೀತಾ, 'ಆಯೋಗದ ಬೆಳಗಾವಿ ಪೀಠದ ನ್ಯಾಯಾಲಯ ಕಲಾಪ ಜೂನ್ 22ರಿಂದ ಆರಂಭಗೊಳ್ಳಲಿದೆ' ಎಂದು ಪ್ರಕಟಿಸಿದರು.

'ಇಲ್ಲಿ ಪೀಠವು ಮಾರ್ಚ್ 3ರಿಂದ ಕಾರ್ಯಾರಂಭ ಮಾಡಬೇಕಿತ್ತು. ಆದರೆ ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ವಿಳಂಬವಾಯಿತು. ಸರ್ಕಾರ ಮತ್ತು ಉತ್ತರ ಕರ್ನಾಟಕದ ಜನರ ಆಶೋತ್ತರದಂತೆ ನಾವು ಮೊದಲ ಹೆಜ್ಜೆ ಇಟ್ಟಿದ್ದು, ಸುವರ್ಣ ವಿಧಾನಸೌಧದಲ್ಲಿ ಕಾರ್ಯಕಲಾಪ ಆರಂಭಿಸಲಾಗುತ್ತಿದೆ. ಈ ಭಾಗದ ಜನರ ಬಹುದಿನಗಳ ಆಶಯ ಇದೀಗ ಈಡೇರಿದಂತಾಗಿದೆ' ಎಂದು ಹೇಳಿದರು.

'ಪೀಠದ ಕಾರ್ಯನಿರ್ವಹಣೆಗೆ ಅವಕಾಶ ಕಲ್ಪಿಸಿದ ಮುಖ್ಯಮಂತ್ರಿ ಹಾಗೂ ವಿಧಾನಸಭೆಯ ಅಧ್ಯಕ್ಷರಿಗೆ ಕೃತಜ್ಞತೆ ಸಲ್ಲಿಸುತ್ತೇನೆ' ಎಂದರು.

ಪೀಠಕ್ಕೆ ಏಳು ಜಿಲ್ಲೆಯ ವ್ಯಾಪ್ತಿ

'ಮಾಹಿತಿ ಆಯೋಗದ ಬೆಳಗಾವಿ ಪೀಠದ ವ್ಯಾಪ್ತಿಯಲ್ಲಿ ಬೆಳಗಾವಿ ವಿಭಾಗದ ಏಳು ಜಿಲ್ಲೆಗಳು ಬರಲಿವೆ. ಈವರೆಗೆ ಒಟ್ಟಾರೆ ನಾಲ್ಕು ಸಾವಿರ ಪ್ರಕರಣಗಳು ಬಾಕಿ ಉಳಿದಿವೆ' ಎಂದು ಮಾಹಿತಿ ನೀಡಿದರು.

'ಬೆಳಗಾವಿ, ಧಾರವಾಡ, ವಿಜಯಪುರ, ಬಾಗಲಕೋಟೆ, ಗದಗ, ಹಾವೇರಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಪ್ರಕರಣಗಳನ್ನು ಪೀಠ ನಿರ್ವಹಿಸಲಿದೆ. ನಾಲ್ಕು ಸಾವಿರ ಪ್ರಕರಣಗಳು ಇರುವುದರಿಂದ ಕೊರೊನಾ ಹಿನ್ನೆಲೆಯಲ್ಲಿ ಆರಂಭದಲ್ಲಿ ಕಡಿಮೆ ಸಂಖ್ಯೆಯ ಪ್ರಕರಣಗಳನ್ನು ಕೈಗೆತ್ತಿಕೊಂಡು ಹಳೆಯ ಪ್ರಕರಣಗಳ ಇತ್ಯರ್ಥಕ್ಕೆ ಆದ್ಯತೆ ನೀಡಲಾಗುವುದು' ಎಂದು ತಿಳಿಸಿದರು.

'ಅಧಿಕಾರಿಗಳು ಮತ್ತು ಮೇಲ್ಮನವಿದಾರರ ಸಮ್ಮುಖದಲ್ಲಿ ತ್ವರಿತವಾಗಿ ಪ್ರಕರಣಗಳ ವಿಲೇವಾರಿ ಮಾಡುವ ಚಿಂತನೆ ಇದೆ. ಇಲ್ಲಿ ವಿಧಾನಮಂಡಲ ಅಧಿವೇಶನ ನಡೆಯುವ ಸಂದರ್ಭದಲ್ಲಿ ಮಾಹಿತಿ ಆಯೋಗದ ಬೆಳಗಾವಿ ಪೀಠದ ಕಾರ್ಯಕಲಾಪಗಳು ನಡೆಯುವುದಿಲ್ಲ. ಈ ಅವಧಿಯಲ್ಲಿ ಪೀಠದ ವ್ಯಾಪ್ತಿಯ ಜಿಲ್ಲೆಗಳಲ್ಲಿ ಅಧಿಕಾರಿಗಳಿಗೆ ಜಾಗೃತಿ ಕಾರ್ಯಾಗಾರ ಆಯೋಜಿಸಲಾವುದು. ಕಾಯ್ದೆಯ ಬಗ್ಗೆ ಸಮರ್ಪಕ ತಿಳಿವಳಿಕೆ ನೀಡಲು ಕಾರ್ಯಕ್ರಮಗಳನ್ನು ಏರ್ಪಡಿಸಲು ನಿರ್ಧರಿಸಲಾಗಿದೆ' ಎಂದರು.

'ಅಧಿವೇಶನ ಸಂದರ್ಭದಲ್ಲಿ ಆಯಾ ಜಿಲ್ಲೆಗಳಲ್ಲಿ ಕಲಾಪ ನಡೆಸಲಾಗುವುದು. ಪೀಠದ ಕಾರ್ಯಕಲಾಪಗಳ ಸುಮಗ ನಿರ್ವಹಣೆಗೆ ಶಾಖಾಧಿಕಾರಿ ಹಾಗೂ ಅಧೀನ ಕಾರ್ಯದರ್ಶಿಗಳ ಅಗತ್ಯವಿದ್ದು, ಅವರನ್ನು ನಿಯೋಜಿಸುವಂತೆ ಕೋರಿ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ' ಎಂದು ವಿವರ ನೀಡಿದರು.

ಸುವರ್ಣ ಸೌಧಕ್ಕೆ ಸಾರಿಗೆ ಸೌಲಭ್ಯ

ಸುವರ್ಣ ವಿಧಾನಸೌಧ ನಗರದಿಂದ ದೂರದಲ್ಲಿರುವುದರಿಂದ ಸದ್ಯಕ್ಕೆ ಪ್ರತಿ ದಿನ ಮೂರು ಬಸ್ಗಳ ವ್ಯವಸ್ಥೆಯನ್ನು ಸಾರಿಗೆ ಇಲಾಖೆ ಕಲ್ಪಿಸಿದೆ. ಕಲಾಪಕ್ಕೆ ಬರುವವರು ಸಮನ್ಸ್ ಪ್ರತಿ ತೋರಿಸಿದರೆ ಮಾತ್ರ ಸುವರ್ಣ ವಿಧಾನಸೌಧದ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗುವುದು' ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.