ಬುಧವಾರ, ಜೂನ್ 16, 2021
23 °C

‘ದೇಶದ ಪ್ರಗತಿಗೆ ಆರ್ಥಿಕ ಸದೃಢತೆಯೇ ಮಾಪನ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ಇಲ್ಲಿನ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಶನಿವಾರ 74ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು.

ಧ್ವಜಾರೋಹಣ ನೆರವೇರಿಸಿದ ಕುಲಪತಿ ಪ್ರೊ.ಎಂ. ರಾಮಚಂದ್ರಗೌಡ ಮಾತನಾಡಿ, ‘ದೇಶ ದಾಸ್ಯದಿಂದ ಬಿಡುಗಡೆ ಹೊಂದಲು ಅನೇಕ ದೇಶ ಭಕ್ತರ ತ್ಯಾಗ, ಬಲಿ ದಾನ ಇದೆ. ಇಲ್ಲಿ ಸ್ವಾತಂತ್ರ್ಯದ ಕಿಚ್ಚು ಹೊತ್ತಿಸಿದ ವೀರ ರಾಣಿ ಕಿತ್ತೂರು ಚನ್ನಮ್ಮ, ಸಂಗೊಳ್ಳಿರಾಯಣ್ಣ, ಬೆಳವಡಿ ಮಲ್ಲಮ್ಮ ಮೊದಲಾದವರನ್ನು ಸ್ಮರಿಸಬೇಕು’ ಎಂದರು.

‘ದೇಶದ ಪ್ರಗತಿಗೆ ಆರ್ಥಿಕ ಸದೃಢತೆಯೇ ಮಾಪನವಾಗಿದೆ’ ಎಂದರು.

‘ವಿಶ್ವವಿದ್ಯಾಲಯದ 316 ಎನ್‌ಎಸ್‌ಎಸ್ ಘಟಕಗಳು ಕೋವಿಡ್ 19 ಬಗ್ಗೆ ಸಮಾಜದಲ್ಲಿ ಅರಿವು ಮೂಡಿಸುವ ಕಾರ್ಯವನ್ನು ಯಶಸ್ವಿಯಾಗಿ ಮಾಡಿವೆ’ ಎಂದು ತಿಳಿಸಿದರು.

ಕುಲಸಚಿವರಾದ ಪ್ರೊ.ಬಸವರಾಜ ಪದ್ಮಶಾಲಿ, ಪ್ರೊ.ಎಸ್.ಎಂ. ಹುರಕಡ್ಲಿ, ಹಣಕಾಸು ಅಧಿಕಾರಿ ಪ್ರೊ.ಡಿ.ಎನ್. ಪಾಟೀಲ ಇದ್ದರು.

ಡಾ.ನಂದಿನಿ ದೇವರಮನಿ ನಿರೂಪಿಸಿದರು. ಎನ್‌ಎಸ್‌ಎಸ್‌ಸ ಸಂಯೋಜನಾಧಿಕಾರಿ ಪ್ರೊ.ಬಿ.ಎಸ್. ನಾವಿ ವಂದಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.