ಶುಕ್ರವಾರ, ಜನವರಿ 22, 2021
27 °C

ಬೆಳಗಾವಿ: ದೇಶದ ಸ್ವಾತಂತ್ರ್ಯಬಲಿದಾನಗಳ ಪ್ರತೀಕ- ಡಾ.ಎಂ. ಜಯಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ‘ಭಾರತದ ಸ್ವಾತಂತ್ರ್ಯ ಹಲವು ಬಲಿದಾನಗಳ ಪ್ರತೀಕವಾಗಿದೆ’ ಎಂದು ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಕಾಲೇಜಿನ ಪ್ರಾಚಾರ್ಯ ಡಾ.ಎಂ. ಜಯಪ್ಪ ಹೇಳಿದರು.

ನಗರದ ಕಾಲೇಜಿನ ಆವರಣದಲ್ಲಿ ಶನಿವಾರ ನಡೆದ 74ನೇ ಸ್ವಾತಂತ್ರೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

‘ಸ್ವಾತಂತ್ರ್ಯ ನಂತರದ ದಿನಗಳಲ್ಲಿ ಭಾರತವು ಅನೇಕ ಸಮಸ್ಯೆಗಳನ್ನು ಎದುರಿಸಿತು. ಡಾ.ಬಿ.ಆರ್. ಅಂಬೇಡ್ಕರ್‌ ನೇತೃತ್ವದಲ್ಲಿ ಸಂವಿಧಾನ ರಚಿಸಿ, ಜಾರಿಗೊಳಿಸಲಾಯಿತು. ಅಂದಿನ ಪ್ರಧಾನಿ ಮುಂದಾಳತ್ವದಲ್ಲಿ ಪಂಚವಾರ್ಷಿಕ ಯೋಜನೆಗಳಿಂದಾಗಿ ಕೃಷಿ, ಕೈಗಾರಿಕೆ, ನೀರಾವರಿ, ಶಿಕ್ಷಣ ಮೊದಲಾದ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಿತು’ ಎಂದರು.

‘ರಾಷ್ಟ್ರೀಯ ಶಿಕ್ಷಣ ನೀತಿ ಮೂಲಕ ವಿದ್ಯಾರ್ಥಿಗಳನ್ನು ಸ್ವಾವಲಂಬಿಗಳನ್ನಾಗಿ ರೂಪಿಸುವ ಗುರುತರ ಜವಾಬ್ದಾರಿ ಶಿಕ್ಷಕರ ಮೇಲಿದೆ’ ಎಂದು ತಿಳಿಸಿದರು.

ಪ್ರೊ.ಜಗದೀಶ ಗಸ್ತಿ ಸ್ವಾಗತಿಸಿದರು. ಡಾ.ಮಲ್ಲೇಶ ದೊಡ್ಡಲಕ್ಕಣ್ಣವರ ನಿರೂಪಿದರು. ಉಪ ಪ್ರಾಚಾರ್ಯ ಪ್ರೊ.ಅನಿಲ ರಾಮದುರ್ಗ ವಂದಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು