ಮಂಗಳವಾರ, ಸೆಪ್ಟೆಂಬರ್ 28, 2021
23 °C

ದೇಶದಾದ್ಯಂತ 1.28 ಲಕ್ಷ ಸ್ಥಳಗಳಲ್ಲಿ ಧ್ವಜಾರೋಹಣ: ಎಬಿವಿಪಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ‘ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ವತಿಯಿಂದ ದೇಶದಾದ್ಯಂತ 1,28,335 ಸ್ಥಳಗಳಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸುವ ಮೂಲಕ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವವನ್ನು ವಿಶಿಷ್ಟವಾಗಿ ಆಚರಿಸಲು ನಿರ್ಧರಿಸಲಾಗಿದೆ’ ಎಂದು ಎಬಿವಿಪಿ ರಾಜ್ಯ ಘಟಕದ ಕಾರ್ಯದರ್ಶಿ ಪ್ರತೀಕ್ ಮಾಳಿ ತಿಳಿಸಿದ್ದಾರೆ.

ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ‘ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ಮಹನೀಯರ ಆಶಯದಂತೆ ಸಾಮಾನ್ಯ ವ್ಯಕ್ತಿ ಕೂಡ ಅಂದು ರಾಷ್ಟ್ರಧ್ವಜಾರೋಹಣ ನೆರವೇರಿಸಬೇಕು ಎನ್ನುವ ಉದ್ದೇಶದಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅಭಿಯಾನದ ರೀತಿಯಲ್ಲಿ ನಡೆಸಲಾಗುವುದು’ ಎಂದರು.

‘ಆ.1ರಂದು ಭೋಪಾಲ್‍ನಲ್ಲಿ ನಡೆದ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ, ಮುಂದಿನ ಯೋಜನೆ ಮತ್ತು ಕಾರ್ಯಕ್ರಮಗಳನ್ನು ಘೋಷಿಸಲಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿಯ ತ್ವರಿತ ಅನುಷ್ಠಾನಕ್ಕಾಗಿ ಪ್ರತಿ ರಾಜ್ಯಗಳಲ್ಲೂ ಸಮಿತಿಗಳನ್ನು ರಚಿಸಲಿದೆ. ಈ ಸಮಿತಿಯು ತಮ್ಮ ರಾಜ್ಯಗಳಲ್ಲಿನ ಸರ್ಕಾರ, ಆಡಳಿತ ಮತ್ತು ವಿಶ್ವವಿದ್ಯಾಲಯಗಳಿಗೆ ಸಲಹೆ–ಸೂಚನೆಗಳನ್ನು ಕಳುಹಿಸುತ್ತದೆ. ಅವುಗಳನ್ನು ತಕ್ಷಣ ಕಾರ್ಯಗತಗೊಳಿಸಲು ಪ್ರಯತ್ನಿಸಲಾಗುತ್ತದೆ’ ಎಂದು ತಿಳಿಸಿದರು.

ರಾಜ್ಯ ಘಟಕದ ಉಪಾಧ್ಯಕ್ಷ ಡಾ.ಆನಂದ ಹೊಸುರ, ಬೆಳಗಾವಿ ವಿಭಾಗದ ಸಂಚಾಲಕ ರೋಹಿತ್ ಉಮನಾಬಾದಿಮಠ, ನಗರ ಘಟಕದ ಕಾರ್ಯದರ್ಶಿ ಕಿರಣ ದುಖಾಂದಾರ, ರಿತೇಶ್ ಹೆಗ್ಡೆ ಪಾಲ್ಗೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು