ಭಾನುವಾರ, 24 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ವಾತಂತ್ರ್ಯೋತ್ಸವ ಎಲ್ಲರ ಪಾಲಿಗೆ ಸುದಿನ: ಜೊಲ್ಲೆ

Published 17 ಆಗಸ್ಟ್ 2023, 14:48 IST
Last Updated 17 ಆಗಸ್ಟ್ 2023, 14:48 IST
ಅಕ್ಷರ ಗಾತ್ರ

ನಿಪ್ಪಾಣಿ: ‘ಸ್ವಾತಂತ್ರ್ಯೋತ್ಸವ ನಮ್ಮೆಲ್ಲರ ಪಾಲಿಗೆ ಸುದಿನ, ಸಂತಸದ ದಿನ. ನಮಗೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮರನ್ನು ಸ್ಮರಿಸುವ ದಿನ. ನಾವು ನಡೆದು ಬಂದ ಹಾದಿಯನ್ನು ಮೆಲುಕು ಹಾಕಿಕೊಂಡು ಮುಂದೆ ಸಾಗಬೇಕಾದ ದಿನ’ ಎಂದು ಶಾಸಕಿ ಶಶಿಕಲಾ ಜೊಲ್ಲೆ ಅಭಿಪ್ರಾಯಪಟ್ಟರು.

ಸ್ಥಳೀಯ ಮುನ್ಸಿಪಲ್ ಪ್ರೌಢಶಾಲೆ ಮೈದಾನದಲ್ಲಿ ಜರುಗಿದ  ತಾಲ್ಲೂಕು ಮಟ್ಟದ ಸಾರ್ವಜನಿಕ ಸ್ವಾತಂತ್ರೋತ್ಸವ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಧ್ವಜಾರೋಹಣ ನೆರವೇರಿಸಿ ತಹಶೀಲ್ದಾರ್‌ ಮುಜಫ್ಫರ್ ಬಳಿಗಾರ, ಕ್ಷೇತ್ರ ಶಿಕ್ಷಣಾಧಿಕಾರಿ ಮಹಾದೇವಿ ನಾಯಿಕ, ಮಾತನಾಡಿದರು. ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ, ವಿವಿಧ ಶಾಲೆಗಳ ಎನ್‍ಸಿಸಿ, ಎನ್‍ಎಸ್‍ಎಸ್, ಸ್ಕೌಟ್ಸ್ ಮತ್ತು ಗೈಡ್ಸ್, ಭಾರತ ಸೇವಾ ದಳದ ವಿದ್ಯಾರ್ಥಿಗಳು ಆಕರ್ಷಕ ಪಥಸಂಚಲನ ನಡೆಸಿದರು.

ಡಿವೈಎಸ್ಪಿ ಹೇಮಂತ ಶರಣ, ತಾಲ್ಲೂಕು ಪಂಚಾಯ್ತಿ ಇಒ ಡಾ. ರವಿಕುಮಾರ ಹುಕ್ಕೇರಿ, ಪೌರಾಯುಕ್ತ ಜಗದೀಶ ಹುಲಗೆಜ್ಜಿ, ನಗರಸಭೆ ಮಾಜಿ ಅಧ್ಯಕ್ಷ ಜಯವಂತ ಭಾಟಲೆ, ಉಪಾಧ್ಯಕ್ಷೆ ನೀತಾ ಬಾಗಡೆ, ಮಾಜಿ ಸಭಾಪತಿ ರಾಜೇಂದ್ರ ಗುಂದೇಶಾ ಉಪಸ್ಥಿತರಿದ್ದರು. ಬಿಆರ್‌ಸಿ ರಾಜಗೌಡ ಕಾಗೆ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT