ಶಿಗ್ಗಾವಿ: ‘ಭಾರತೀಯ ಸಂವಿಧಾನ ಇಡೀ ಜಗತ್ತಿಗೆ ಮಾದರಿಯಾಗಿದೆ. ಡಾ.ಬಿ.ಆರ್.ಅಂಬೇಡ್ಕರ್ ಅವರ ಪರಿಶ್ರಮ ಇದಕ್ಕೆ ಕಾರಣವಾಗಿದೆ. ಅವರ ಸ್ಮರಣೆ ಅರ್ಥಪೂರ್ಣ’ ಎಂದು ರಾಜ್ಯ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಹೇಳಿದರು.

ಪಟ್ಟಣದ ಸಂತೆ ಮೈದಾನದಲ್ಲಿ ಮಂಗಳವಾರ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ಪುರಸಭೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರ ಒಕ್ಕೂಟಗಳ ಸಹಯೋಗದಲ್ಲಿ ನಡೆದ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಡಾ. ಬಾಬು ಜಗಜೀವನರಾಂ ಅವರ ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಸಂವಿಧಾನದದಿಂದಾಗಿ ಎಲ್ಲ ಸಮುದಾಯದಲ್ಲಿ ಸಮಾನತೆಯ ಮನೋಭಾವ ಮೂಡಿಸಲು ಸಾಧ್ಯವಾಗಿದೆ. ಮಕ್ಕಳಲ್ಲಿ ದೇಶಾಭಿಮಾನ ಬಿತ್ತಬೇಕು. ಅಂಬೇಡ್ಕರ್ ಹಾಗೂ ಬಾಬು ಜಗಜೀವನರಾಂ ಅವರಂತಹ ಮಹಾತ್ಮರ ಆದರ್ಶ ಚರಿತ್ರೆಗಳನ್ನು ಮಕ್ಕಳಿಗೆ ತಿಳಿಸಬೇಕು. ಅವರ ಮಾರ್ಗದರ್ಶನದಲ್ಲಿ ನಡೆದಾಗ ಬದುಕು ಯಶಸ್ವಿಯಾಗುವ ಜತೆಗೆ ನಾಡಿನ ಶ್ರೇಯೋಭಿವೃದ್ಧಿ ಸಾಧ್ಯ’ ಎಂದು ಹೇಳಿದರು.

ಧಾರವಾಡದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಶೇಖರ್ ಸಜ್ಜನ್ ಡಾ.ಬಿ.ಆರ್. ಅಂಬೇಡ್ಕರ್ ಅವರ ಕುರಿತು, ಬೆಂಗಳೂರು ಖಜಾನೆ ಇಲಾಖೆಯ ಸಹಾಯಕ ನಿರ್ದೇಶಕ ನಾಗರಾಜ ಭವಾನಿ ಅವರು ಡಾ. ಬಾಬು ಜಗಜೀವನರಾಂ ಅವರ ಕುರಿತು ಉಪನ್ಯಾಸ ನೀಡಿದರು. ಬಿಇಒ ಎಂ.ಬಿ. ಅಂಬಿಗೇರ ಪ್ರಾಸ್ತಾವಿಕವಾಗಿ ಮಾತನಾಡಿದರು.

ಇದಕ್ಕೂ ಮೊದಲು ಡಾ. ಬಿ.ಆರ್. ಅಂಬೇಡ್ಕರ್ ಅವರ ಹಾಗೂ ಡಾ. ಬಾಬು ಜಗಜೀವನರಾಂ ಅವರ ಭಾವಚಿತ್ರದ ಭವ್ಯ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಎಸ್.ಎಫ್. ಮಣಕಟ್ಟಿ, ತಹಶೀಲ್ದಾರ್ ಯಲ್ಲಪ್ಪ ಗೋಣೆಣ್ಣವರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುಡ್ಡಪ್ಪ ಜಲದಿ, ಇಒ ಮಂಜುನಾಥ ಸಾಳೊಂಕೆ, ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಸರಸ್ವತಿ ಗಜಕೋಶ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-22-1156244217

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.