ಗುರುವಾರ , ಆಗಸ್ಟ್ 11, 2022
24 °C

ಯಳ್ಳೂರಲ್ಲಿ ಒಳಾಂಗಣ ಕ್ರೀಡಾಂಗಣ ನಿರ್ಮಾಣಕ್ಕೆ ಯೋಜನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ತಾಲ್ಲೂಕಿನ ಯಳ್ಳೂರು ಗ್ರಾಮd ವ್ಯಾಪ್ತಿಯಲ್ಲಿರುವ 40 ಎಕರೆ ಸರ್ಕಾರಿ ಜಾಗದಲ್ಲಿ, ಮಹಾರಾಷ್ಟ್ರದ ಪುಣೆಯ ಬಾಲೆವಾಡಿ ಮಾದರಿಯಲ್ಲಿ ಅಂತರರಾಷ್ಟ್ರೀಯ ಗುಣಮಟ್ಟದ ಒಳಾಂಗಣ ಕ್ರೀಡಾಂಗಣ ನಿರ್ಮಿಸಲು ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಯೋಜನೆ ಸಿದ್ಧಪಡಿಸುತ್ತಿದ್ದಾರೆ.

ಇದರ ಭಾಗವಾಗಿ, ಕ್ರೀಡಾ ಇಲಾಖೆಯ ಆಯುಕ್ತ ಶ್ರೀನಿವಾಸ ಅವರೊಂದಿಗೆ ಜಾಗವನ್ನು ಸೋಮವಾರ ಪರಿಶೀಲಿಸಿದರು.

ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ನಗರವು ಫೌಂಡ್ರಿ ಉದ್ಯಮ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಗಮನಸೆಳೆದಿದೆ. ಅಂತೆಯೇ ಕ್ರೀಡಾರಂಗದಲ್ಲೂ ನಗರವನ್ನು ಬೆಳೆಸುವ ಸಂಕಲ್ಪ ಮಾಡಿದ್ದೇನೆ. ಯಳ್ಳೂರ ಗ್ರಾಮದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ  ಸಹಯೋಗದೊಂದಿಗೆ ಒಳಾಂಗಣ ಕ್ರೀಡಾಂಗಣ ನಿರ್ಮಿಸಲು ಸರ್ಕಾರ ಮುಂದಾಗಿದೆ. ಈ ಕುರಿತು ಹಲವು ಬಾರಿ ಚರ್ಚಿಸಿ ಗಮನಸೆಳೆದಿದ್ದೇನೆ. ಯೋಜನೆ  ಅನುಷ್ಠಾನಕ್ಕೆ ಕಾರ್ಯಪ್ರವೃತ್ತನಾಗಿದ್ದೇನೆ’ ಎಂದು ತಿಳಿಸಿದರು.

‘ಉತ್ತರ ಕರ್ನಾಟಕ ಭಾಗದಲ್ಲಿ ಬಹಳಷ್ಡು ಜನ ಕ್ರೀಡಾಪಟುಗಳಿದ್ದಾರೆ. ಬೆಳಗಾವಿಯಲ್ಲಿ ಸುಸಜ್ಜಿತ ಒಳಾಂಗಣ ಕ್ರೀಡಾಂಗಣ ನಿರ್ಮಾಣವಾದರೆ ಕ್ರಿಕೆಟ್  ಹೊರತುಪಡಿಸಿ ಉಳಿದ ಕ್ರೀಡೆಗಳಿಗೆ ಒಂದೇ ಸೂರಿನಲ್ಲಿ ಅವಕಾಶವಾಗಲಿದೆ. ಜೊತೆಗೆ ಕ್ರೀಡಾಪಟುಗಳಿಗೆ ತರಬೇತಿ ಮತ್ತು ಮಾರ್ಗದರ್ಶನ ಸಿಗಲಿದೆ. ಇದರಿಂದ ಬೆಳಗಾವಿ ಆರ್ಥಿಕವಾಗಿಯೂ ಬೆಳೆಯಲಿದೆ. ಕ್ರೀಡಾ ಲೋಕದಲ್ಲಿ ಇಲ್ಲಿನ ಪ್ರತಿಭೆಗಳು ಎತ್ತರದ ಸಾಧನೆ ಮಾಡುವುದಕ್ಕೆ ಸಾಧ್ಯವಾಗಲಿದೆ’ ಎಂದು  ವಿಶ್ವಾಸ ವ್ಯೆಕ್ತಪಡಿಸಿದರು.

‘ದಕ್ಷಿಣ ಭಾರತದಲ್ಲೇ ಇಂತಹ ಒಳಾಂಗಣ ಕ್ರೀಡಾಂಗಣ ಇಲ್ಲ. ಬೆಳಗಾವಿಯಲ್ಲಿ ಅದು ನಿರ್ಮಾಣ ಆಗುತ್ತಿರುವುದು ಮತ್ತು ಅದಕ್ಕೆ ಸರ್ಕಾರ ಸಮ್ಮತಿ ಸೂಚಿಸಿರುವುದು ಹೆಮ್ಮೆಯ ಸಂಗತಿಯಾಗಿದೆ’ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು