ಮಂಗಳವಾರ, ಆಗಸ್ಟ್ 9, 2022
23 °C

ಭ್ರೂಣಗಳ ಹತ್ಯೆ ಪ್ರಕರಣ: ಡಿಎಚ್‌ಒಗೆ ಕರೆ ಮಾಡಿ ಮಾಹಿತಿ ಪಡೆದ ಸಚಿವ ಸುಧಾಕರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಜಿಲ್ಲೆಯ ಮೂಡಲಗಿ ಪಟ್ಟಣದಲ್ಲಿ ಶುಕ್ರವಾರ ಏಳು ಭ್ರೂಣಗಳು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ಆರೋಗ್ಯ ಸಚಿವ ಡಾ.ಕೆ‌.ಸುಧಾಕರ್ ಶನಿವಾರ ಮಾಹಿತಿ ಪಡೆದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ. ಮಹೇಶ ಕೋಣಿ ಅವರಿಗೆ ಕರೆ ಮಾಡಿದ ಸಚಿವರು, ಈ ಘಟನೆಗೆ ಕಾರಣವೇನು? ಪ್ರಕರಣದಲ್ಲಿ ಯಾರು ಭಾಗಿಯಾಗಿದ್ದಾರೆ ಎನ್ನುವ ಮಾಹಿತಿ ಪಡೆದರು. 

‘ಇದು ಗಂಭೀರವಾದ ಪ್ರಕರಣ. ಯಾರೇ ತಪ್ಪಿತಸ್ಥರಿದ್ದರೂ, ಅವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು. ಯಾರ ಒತ್ತಡಕ್ಕೂ ಮಣಿಯಬಾರದು’ ಎಂದು ಸೂಚಿಸಿದರು.

ಇದನ್ನೂ ಓದಿ..

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು