ಸಂಕೇಶ್ವರ: ರಾಜ್ಯ ಮತ್ತು ಕೇಂದ್ರ ಸರ್ಕಾರಗಳಲ್ಲಿ ಅನೇಕ ಜನೋಪಯೋಗಿ ಯೋಜನೆಗಳಿದ್ದು, ಅವುಗಳ ಕುರಿತು ಗ್ರಾಮೀಣ ಜನರಿಗೆ ತಿಳಿವಳಿಕೆ ನೀಡುವ ಕಾರ್ಯವನ್ನು ಗ್ರಾಮ ಮಟ್ಟದ ಅಧಿಕಾರಿಗಳು ಮಾಡಬೇಕೆಂದು ಶಾಸಕ ನಿಖಿಲ ಕತ್ತಿ ಹೇಳಿದರು.

ಸಂಕೇಶ್ವರ ಸಮೀಪದ ಅಂಕಲಿಯಲ್ಲಿ ಗ್ರಾಮ ಮಟ್ಟದ ಜನಸಂಪರ್ಕ ಸಭೆಯಲ್ಲಿ ಮಾತನಾಡಿದರು.

ಕೃಷಿ, ಪಶುಸಂಗೋಪಣೆ, ತೋಟಗಾರಿಕೆ, ರೇಷ್ಮೆ, ಕೃಷಿ ಮಾರುಕಟ್ಟೆ, ಸಹಕಾರ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗ. ಕೈಗಾರಿಕೆ ಇಲಾಖೆಗಳಲ್ಲಿ ಗ್ರಾಮೀಣ ಜನರಿಗೆ ಅನುಕೂಲವಾಗುವ ಅನೇಕ ಯೋಜನೆಗಳಿದ್ದು ಅವುಗಳ ಬಗೆಗೆ ಜನರಿಗೆ ಮಾಹಿತಿ ನೀಡಿ, ನಿಗದಿತ ಸಮಯದಲ್ಲಿ ಅರ್ಜಿಗಳನ್ನು ಹಾಕಿಸಬೇಕು ಎಂದು ಅವರು ಹೇಳಿದರು.

ಇದೇ ಸಂದರ್ಭದಲ್ಲಿ ಅಂಕಲಿ ಗ್ರಾಮದಲ್ಲಿ ಸೇತುವೇ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಕೊಳ್ಳಬೇಕೆಂದು ಅಂಕಲಿ ಗ್ರಾಮಸ್ಥರು ಶಾಸಕರಲ್ಲಿ ಮನವಿ ಮಾಡಿದರು.

ಜನ ಸಂಪರ್ಕಸಭೆಯಲ್ಲಿ ತಹಶೀಲ್ದಾರ್ ಮಂಜುಳಾ ನಾಯಿಕ, ಕ್ಷೇತ್ರ ಶಿಕ್ಷಣಾಧಿಕಾರಿ ಪ್ರತಿಭಾ ಪಾಟೀಲ, ಅಂಕಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅನಿತಾ ಆಜರೇಕರ, ಉಪಾಧ್ಯಕ್ಷೆ ಸುಜಾತಾ ಘಸ್ತಿ, ಸದಸ್ಯರಾದ ಗಂಗಾಧರ ಪಾಟೀಲ, ಏಕನಾಥ ಪವಾರ, ಭರತ ಪುಂಡೆ, ಪಿಡಿಒ ಕಲ್ಲಪ್ಪಾ ಕುರಣಿ ಮುಂತಾದವರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.