7

ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಬಾರದು: ರಂಭಾಪುರಿ ಶ್ರೀ

Published:
Updated:

ಬೆಳಗಾವಿ: ‘ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗದಂತೆ ನೋಡಿಕೊಳ್ಳಬೇಕು’ ಎಂದು ಬಾಳೆಹೊನ್ನೂರು ರಂಭಾಪುರಿ ಪೀಠದ ಪ್ರಸನ್ನ ರೇಣುಕ ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಇಲ್ಲಿನ ಹುಕ್ಕೇರಿ ಹಿರೇಮಠ ಶಾಖೆಯಲ್ಲಿ ಭಾನುವಾರ ನಡೆದ ಸುವಿಚಾರ ಚಿಂತನ, ಶಿವದೀಕ್ಷೆ ಹಾಗೂ ಅಯ್ಯಚಾರ ಕಾರ್ಯಕ್ರಮದ ನಂತರ ಪತ್ರಕರ್ತರೊಂದಿಗೆ ಅವರು ಮಾತನಾಡಿದರು. ‘ಈ ಬಜೆಟ್‌ನಲ್ಲಿ ಉತ್ತರ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಒತ್ತು ನೀಡಬೇಕು. ಬಹುದಿನಗಳಿಂದ ನನೆಗುದಿಗೆ ಬಿದ್ದಿರುವ  ಯೋಜನೆಗಳ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಬೇಕು. ತ್ವರಿತಗತಿಯಲ್ಲಿ ನಡೆಯುವಂತೆ ನೋಡಿಕೊಳ್ಳಬೇಕು. ದಕ್ಷಿಣ ಕರ್ನಾಟಕಕ್ಕೆ ಸಿಕ್ಕಷ್ಟೇ ಪ್ರಾಧಾನ್ಯತೆ ಉತ್ತರಕ್ಕೂ ಸಿಗುವಂತೆ ನಿಗಾ ವಹಿಸಬೇಕು’ ಎಂದು ಒತ್ತಾಯಿಸಿದರು.

‘ಈ ಬಾರಿ ರಾಜ್ಯದಾದ್ಯಂತ ಉತ್ತಮ ಮಳೆಯಾಗುತ್ತಿದೆ. ಇದು ಸಂತಸದ ಬೆಳವಣಿಗೆ. ರೈತರು ಸಾಲ ಮರುಪಾವತಿಸಲಾಗದೇ ಆತ್ಮಹತ್ಯೆ  ಮಾಡಿಕೊಳ್ಳುತ್ತಿದ್ದಾರೆ. ಇದು ಮುಂದುವರಿಯಬಾರದು. ಸರ್ಕಾರ ರೈತರ ಸಾಲ ಮನ್ನಾ ಮಾಡಿ, ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕು’ ಎಂದರು.

ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಕುರಿತು ಪ್ರತಿಕ್ರಿಯೆಗೆ ನಿರಾಕರಿಸಿದರು.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !