ಸೋಮವಾರ, 9 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಳಗಾವಿಯ ಹಿಂಡಲಗಾ ಕಾರಾಗೃಹದಲ್ಲಿ ಹೊಡೆದಾಡಿಕೊಂಡ ಕೈದಿಗಳು: ಆಸ್ಪತ್ರೆಗೆ ದಾಖಲು

ಮಂಡ್ಯದ ಸಾಯಿಕುಮಾರ್‌ ಹಾಗೂ ಶಂಕರ ಭಜಂತ್ರಿ ಎನ್ನುವ ಕೈದಿಗಳ ಮಧ್ಯೆ ಹೊಡೆದಾಟ
Published 30 ಜುಲೈ 2023, 11:07 IST
Last Updated 30 ಜುಲೈ 2023, 11:07 IST
ಅಕ್ಷರ ಗಾತ್ರ

ಬೆಳಗಾವಿ: ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಕೈದಿಗಳಿಬ್ಬರು ಶನಿವಾರ ಹೊಡೆದಾಡಿಕೊಂಡಿದ್ದು, ಇಬ್ಬರಿಗೂ ಗಾಯಗಳಾಗಿವೆ. ಚಿಕಿತ್ಸೆಗಾಗಿ ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಕೊಲೆ ಪ್ರಕರಣದ ವಿಚಾರಣೆ ಎದುರಿಸುತ್ತಿರುವ ಸಾಯಿಕುಮಾರ್‌ ಮತ್ತು ಪ್ರಕರಣವೊಂದರಲ್ಲಿ ಶಿಕ್ಷೆ ಎದುರಿಸುತ್ತಿರುವ ಶಂಕರ ಭಜಂತ್ರಿ ಅವರ ಮಧ್ಯೆ ಹೊಡೆದಾಟವಾಗಿದೆ.

‘ಮಂಡ್ಯ ಮೂಲದ ಸಾಯಿಕುಮಾರ್‌ಗೆ ಶಂಕರ ಭಜಂತ್ರಿ ಬಲವಾಗಿ ಹೊಡೆದಿದ್ದಾನೆ. ಸ್ಕ್ರೂಡ್ರೈವರ್‌ನಿಂದ ಎದೆಗೆ ಐದು ಬಾರಿ ಚುಚ್ಚಿದ್ದಾನೆ’ ಎಂದು ಕಾರಾಗೃಹದ ಮೂಲಗಳು ತಿಳಿಸಿವೆ.

‘ಸಾಯಿಕುಮಾರ್‌ಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಮರು ಹೊಡೆತದಿಂದ ಶಂಕರ ಕೂಡ ಗಾಯಗೊಂಡಿದ್ದಾನೆ. ಇಬ್ಬರೂ ಒಳರೋಗಿಗಳಾಗಿ ದಾಖಲಾಗಿದ್ದಾರೆ’ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

‘ತಮ್ಮ ವೈಯಕ್ತಿಕ ಕಾರಣಕ್ಕೆ ಇಬ್ಬರು ಕೈದಿಗಳು ಹೊಡೆದಾಡಿಕೊಂಡಿದ್ದಾರೆ. ಇದರಲ್ಲಿ ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದೇವೆ. ಇಬ್ಬರ ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತಿದೆ’ ಎಂದು ಹಿಂಡಲಗಾ ಕೇಂದ್ರ ಕಾರಾಗೃಹದ ಅಧೀಕ್ಷಕ ಕೃಷ್ಣಕುಮಾರ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT