ಭಾನುವಾರ, ನವೆಂಬರ್ 1, 2020
19 °C

ಕಿತ್ತೂರು ಉತ್ಸವದಂದೇ ಭೂಮಿ ಪೂಜೆ: ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ‘ಉತ್ತರ ಕರ್ನಾಟದ ಸ್ವಾಭಿಮಾನದ ಪ್ರತೀಕವಾದ ಕಿತ್ತೂರು ಉತ್ಸವದಂದು ಇಲ್ಲಿನ ಸುವರ್ಣ ವಿಧಾನಸೌಧದ ಮುಂದೆ ವೀರರಾಣಿ ಕಿತ್ತೂರು ಚನ್ನಮ್ಮ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆಗೆ ಭೂಮಿ ಪೂಜೆ ನೆರವೇರಿಸಬೇಕು’ ಎಂದು ಕರವೇ ಜಿಲ್ಲಾ ಘಟಕದ ಅಧ್ಯಕ್ಷ ದೀಪಕ ಗುಡಗನಟ್ಟಿ ಒತ್ತಾಯಿಸಿದ್ದಾರೆ.

ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ‘ಸರ್ಕಾರವು ಬೈಲಹೊಂಗಲದಲ್ಲಿರುವ ಚನ್ನಮ್ಮನ ಸಮಾಧಿ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕು. ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಚನ್ನಮ್ಮನ ಹೆಸರು ನಾಮಕರಣ ಮಾಡಬೇಕು. ಕೇಂದ್ರ ಸರ್ಕಾರ ಅನುಮತಿ ನೀಡುವ ವಿಷಯದಲ್ಲಿ ವಿಳಂಬ ಮಾಡದೆ, ಕಿತ್ತೂರು ಉತ್ಸವಕ್ಕೂ ಮುನ್ನ ಎಲ್ಲ ಪ್ರಕ್ರಿಯೆಗಳನ್ನೂ ಪೂರ್ಣಗೊಳಿಸಬೇಕು. ಉತ್ಸವದ ಉದ್ಘಾಟನೆ ದಿನವೇ ನಾಮಕರಣ ಮಾಡಬೇಕು’ ಎಂದು ಆಗ್ರಹಿಸಿದ್ದಾರೆ.

‘ಈ ಕುರಿತು ಜಿಲ್ಲೆಯ ಎಲ್ಲ ಶಾಸಕರು ಪಕ್ಷಾತೀತವಾಗಿ ವಿಧಾನಮಂಡಲ ಅಧಿವೇಶನದಲ್ಲಿ ದನಿ ಎತ್ತಬೇಕು. ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಶೀಘ್ರದಲ್ಲೇ ನಿಯೋಗವು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಲಿದೆ’ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು