ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುನರ್ವಸತಿಗೆ ಆದ್ಯತೆ ನೀಡಲು ಸೂಚನೆ

Last Updated 12 ಆಗಸ್ಟ್ 2019, 12:27 IST
ಅಕ್ಷರ ಗಾತ್ರ

ಬೆಳಗಾವಿ: ‘ಜಿಲ್ಲೆಯಲ್ಲಿ ಉತ್ತಮ ರಕ್ಷಣಾ ಕಾರ್ಯ ನಡೆದಿದೆ. ಪುನರ್ವಸತಿ ಬಗ್ಗೆ ಜನರ ನಿರೀಕ್ಷೆ ಜಾಸ್ತಿ ಇರುತ್ತದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯೋನ್ಮುಖವಾಗಬೇಕು’ ಎಂದು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಸೂಚಿಸಿದರು.

ಪ್ರವಾಹದಲ್ಲಿ ಸಿಲುಕಿದ ಜನರ ರಕ್ಷಣೆ ಹಾಗೂ ಪುನರ್ವಸತಿಗೆ ಸಂಬಂಧಿಸಿದಂತೆ ಸೋಮವಾರ ನಡೆದ ಜಿಲ್ಲಾಮಟ್ಟದ ಅಧಿಕಾರಿಗಳ ವಿಡಿಯೊ ಕಾನ್ಫರೆನ್ಸ್‌ನಲ್ಲಿ ಚಿಕ್ಕೋಡಿಯಿಂದ ಅವರು ಮಾತನಾಡಿದರು.

‘ಸಂತ್ರಸ್ತರಾದ ಪ್ರತಿ ಕುಟುಂಬಕ್ಕೂ ಹಾಸಿಗೆ, ಹೊದಿಕೆ, ಬಟ್ಟೆ ತಲುಪಿಸಬೇಕು. ಸರ್ಕಾರ ಹಾಗೂ ಸಾರ್ವಜನಿಕರಿಂದ ನೆರವು ಹರಿದುಬರುತ್ತಿದ್ದು, ಅದನ್ನು ಸಕಾಲದಲ್ಲಿ ತಲುಪಿಸಬೇಕು. ಪಠ್ಯಪುಸ್ತಕ ಕಳೆದುಕೊಂಡ ಮಕ್ಕಳಿಗೆ ಹೆಚ್ಚುವರಿ ಪುಸ್ತಕಗಳನ್ನು ಒದಗಿಸಬೇಕು’ ಎಂದು ತಿಳಿಸಿದರು.

‘ಆಲಮಟ್ಟಿ ಜಲಾಶಯದ ಒಳಹರಿವು ಹಾಗೂ ಹೊರಹರಿವು ನಡುವೆ ವ್ಯತ್ಯಾಸವಾಗುತ್ತಿದೆ. ಆದ್ದರಿಂದ ಜಲಾಶಯದ ಒಳಹರಿವು ಪ್ರಮಾಣಕ್ಕೆ ಅನುಗುಣವಾಗಿ ಹೊರಹರಿವು ಪ್ರಮಾಣ ಕಾಯ್ದುಕೊಳ್ಳುವ ಅಗತ್ಯವಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು’ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ ಕೋರಿದರು.

‘ಒಳಹರಿವು ಮತ್ತು ಹೊರಹರಿವು ಸಮಪ್ರಮಾಣದಲ್ಲಿ ಕಾಯ್ದುಕೊಂಡರೆ ಪರಿಸ್ಥಿತಿ ಇನ್ನಷ್ಟು ಉತ್ತಮಪಡಿಸಲು ಸಾಧ್ಯವಾಗಲಿದೆ’ ಎಂದರು.

‘ಈ ಬಗ್ಗೆ ಸೂಚಿಸಲಾಗುವುದು’ ಎಂದು ಗೋಯಲ್ ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT