ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ವಿಶ್ವಕರ್ಮ ಸಮುದಾಯಕ್ಕೆ ಅಪಮಾನ’

ಪೂರ್ವಸಿದ್ಧತಾ ಸಭೆ ನಡೆಸದೆ ಕಾರ್ಯಕ್ರಮ ಆಯೋಜನೆ: ಆರೋಪ
Last Updated 17 ಸೆಪ್ಟೆಂಬರ್ 2022, 4:45 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಸೆ.17ರಂದು ನಡೆಯಲಿರುವ ತಾಲ್ಲೂಕು ಮಟ್ಟದ ವಿಶ್ವಕರ್ಮ ಜಯಂತಿ ಕಾರ್ಯಕ್ರಮಕ್ಕೆ ಯಾವುದೇ ಪೂರ್ವಭಾವಿ ಸಭೆ ನಡೆಸಿಲ್ಲ. ಈ ಮೂಲಕ ವಿಶ್ವಕರ್ಮ ಸಮುದಾಯದಯವನ್ನು ವಿಶ್ವಾಸಕ್ಕೆತೆಗದುಕೊಳ್ಳದೇಅಪಮಾನಮಾಡಲಾಗಿದೆ. ಈ ಸಂಬಂಧ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗೆ ದೂರು ನೀಡಲಾಗಿದೆ ಎಂದು ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ತಾಲ್ಲೂಕು ಘಟಕದ ಅಧ್ಯಕ್ಷ ಟಿ.ಎ.ಕೇಶವಾಚಾರ್
ಹೇಳಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪ್ರತಿವರ್ಷ ಕಾರ್ಯಕ್ರಮಕ್ಕೂ ಮುನ್ನ ವಿಶ್ವಕರ್ಮ ಸಮುದಾಯದ ಮುಖಂಡರು ಮತ್ತು ವಿವಿಧ ಸಂಘಟನೆಗಳ ಕಾರ್ಯಕರ್ತರನ್ನು ಆಹ್ವಾನಿಸಿ ಪೂರ್ವಭಾವಿ ಸಭೆ ನಡೆಸಲಾಗುತ್ತಿತ್ತು. ಆದರೆ ಈ ಬಾರಿ ವಿಶ್ವಕರ್ಮ ಜಯಂತಿ ಆಚರಣೆಗೆ ಎರಡು ದಿನ ಇದ್ದರೂ ಯಾವುದೇ ಸಭೆ ನಡೆಸಿಲ್ಲ. ಕಾರ್ಯಕ್ರಮವನ್ನು ತರಾತುರಿಯಲ್ಲಿ ಆಯೋಜಿಸಲಾಗುತ್ತಿದೆ. ನಮಗೂ ಅಧಿಕೃತ ಆಹ್ವಾನ ನೀಡಿಲ್ಲ’ಎಂದು
ದೂರಿದರು.

‘ಜಿಲ್ಲಾ ಮಟ್ಟದಲ್ಲಿ ಅಪರ ಜಿಲ್ಲಾಧಿಕಾರಿಗಳು ಈಗಾಗಲೇ ವಿಶ್ವಕರ್ಮ ಜಯಂತಿ ಆಚರಣೆ ಕುರಿತಂತೆ ಸಭೆ ಕರೆದಿದ್ದರು. ಆದರೆ ಇಲ್ಲಿ ಯಾವುದೇ ಮಾಹಿತಿ ನೀಡದೇ ನಮ್ಮನ್ನು ಕಡೆಗಣಿಸಲಾಗಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಂಘದ ಕಾರ್ಯಾಧ್ಯಕ್ಷ ಪಾಪಾಚಾರಿ ಮಾತನಾಡಿ, ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿ ಶಿಷ್ಟಾಚಾರ ಉಲ್ಲಂಘಿಸಿದ್ದಾರೆ. ಇದು ಸಮುದಾಯಕ್ಕಷ್ಟೇ ಅಲ್ಲ ದೇಶದ ಸಂಸ್ಕೃತಿಗೂ ಮಾಡಿದ ಅಪಮಾನ
ಎಂದು ಹೇಳಿದರು.

ದಕ್ಷಿಣ ಭಾರತದ ಇತರೆ ರಾಜ್ಯಗಳಲ್ಲಿ ವಿಶ್ವಕರ್ಮ ಜಯಂತಿಗೆ ರಜಾ ಘೋಷಿಸಿ, ಸಂಭ್ರಮದಿಂದ ಆಚರಿಸುತ್ತಾರೆ. ಆದರೆ ಇಲ್ಲಿ ನಮ್ಮ ಸಮುದಾಯವನ್ನು ನಿರ್ಲಕ್ಷ್ಯ ಮಾಡಲಾಗಿದೆ. ಇದು ಹೀಗೆ ಮುಂದುವರಿದರೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ತಾಲ್ಲೂಕು ಘಟಕದ ಉಪಾಧ್ಯಕ್ಷ ರಾಘವೇಂದ್ರಾಚಾರ್, ಕಾರ್ಯದರ್ಶಿ ಎಸ್. ಭಾಸ್ಕರಾಚಾರ್, ಸಂಚಾಲಕ ಅಮರ ನಾರಾಯಣಾಚಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT