ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ವಿಮೆ ಪರಿಹಾರ ಪಡೆಯಲು ಅವಕಾಶ’

Last Updated 24 ನವೆಂಬರ್ 2021, 16:06 IST
ಅಕ್ಷರ ಗಾತ್ರ

ಬೆಳಗಾವಿ: ‘ಬೆಳೆ ವಿಮೆ ಯೋಜನೆಯಲ್ಲಿ ನೋಂದಾಯಿಸಿದ ರೈತರಿಗೆ ವಿಮೆ ಪರಿಹಾರ ಪಡೆಯಲು ಅವಕಾಶವಿದೆ’ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ ತಿಳಿಸಿದ್ದಾರೆ.

‘ಬೆಳೆ ಕಟಾವು /ಕೊಯ್ಲಿನ ನಂತರ ಜಮೀನಿನಲ್ಲೆ ಒಣಗಿಸಲು ಬಿಟ್ಟ ಸಂದರ್ಭಗಳಲ್ಲಿ ಅಥವಾ ಜಮೀನಿನಲ್ಲಿ ಕಟಾವು/ ಕೊಯ್ಲು ಮಾಡಿಟ್ಟ ವೇಳೆ ಚಂಡಮಾರುತ, ಚಂಡಮಾರುತ ಸಹಿತ ಮಳೆ ಮತ್ತು ಅಕಾಲಿಕ ಮಳೆಯಿಂದಾಗಿ ಫಸಲು ಹಾಳಾದಲ್ಲಿ ಪರಿಹಾರ ಪಡೆಯಬಹುದಾಗಿದೆ (ಬೆಳೆ ವಿಮೆ ಯೋಜನೆಯಡಿ ನೋಂದಾಯಿಸಿದವರು)’ ಎಂದು ಮಾಹಿತಿ ನೀಡಿದ್ದಾರೆ.

‘2021ರ ಮುಂಗಾರು ಹಂಗಾಮಿನ ಬೆಳೆಗಳು ಹಾಳಾಗಿದ್ದಲ್ಲಿ, ವಿಮಾ ಸಂಸ್ಥೆಯು ನಷ್ಟ ನಿರ್ಧರಿಸಿ ಇತ್ಯರ್ಥಪಡಿಸಲು ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಲ್ಲಿ ಅವಕಾಶ ಕಲ್ಪಿಸಲಾಗಿದೆ. ರೈತರು ಸಂಬಂಧಿಸಿದ ವಿಮಾ ಸಂಸ್ಥೆಯ ಕಚೇರಿಗೆ ನೇರವಾಗಿ ತಕ್ಷಣ ತಿಳಿಸಬೇಕು. ಹೆಚ್ಚಿನ ಮಾಹಿತಿಗೆ ವಿಮಾ ಸಂಸ್ಥೆಯ ಜಿಲ್ಲಾ ಪ್ರತಿನಿಧಿ (ಗುತ್ತೆಪ್ಪ ಅಗಸರ ಮೊ.ಸಂಖ್ಯೆ: 8291813953), ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT