ಭಾನುವಾರ, ಏಪ್ರಿಲ್ 5, 2020
19 °C

ಅಂತರ ಕಾಲೇಜು ಕಬಡ್ಡಿ ಟೂರ್ನಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ಇಲ್ಲಿನ ಆರ್.ಪಿ.ಡಿ. ಕಾಲೇಜಿನಿಂದ ಸೋಮವಾರ ಆಯೋಜಿಸಿದ್ದ 2019-20ನೇ ಸಾಲಿನ ಆರ್‌ಸಿಯು ಅಂತರ ಕಾಲೇಜುಗಳ ವಲಯ ಮಟ್ಟದ ಕಬಡ್ಡಿ ಟೂರ್ನಿಯನ್ನು ಜಿಎಸ್‌ಎಸ್‌ ಕಾಲೇಜಿನ ಪ್ರಾಚಾರ್ಯ ಪ್ರೊ.ಎನ್.ಡಿ. ಹೆಗಡೆ ಉದ್ಘಾಟಿಸಿದರು.

‘ವಿದ್ಯಾರ್ಥಿ ಜೀವನದಲ್ಲಿ ಪಠ್ಯಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳು ಅಗತ್ಯ. ಸದೃಢ ಮನಸ್ಸು ಮತ್ತು ಶರೀರಕ್ಕಾಗಿ ಆಟೋಟಗಳಲ್ಲೂ ಪಾಲ್ಗೊಳ್ಳಬೇಕು’ ಎಂದು ಸಲಹೆ ನೀಡಿದರು.

ಆರ್.ಪಿ.ಡಿ. ಕಾಲೇಜಿನ ಪ್ರಭಾರ ಪ್ರಾಚಾರ್ಯರಾದ ಡಾ.ಶೋಭಾ ನಾಯಕ ಮಾತನಾಡಿದರು. ಆರ್.ಎಲ್.ಎಸ್. ಕಾಲೇಜಿನ ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಜಿ.ಎನ್ ಪಾಟೀಲ, ಸಿ.ಬಿ. ನಾಯಕ, ದೈಹಿಕ ಶಿಕ್ಷಣ ನಿರ್ದೇಶಕ ಎನ್. ರಾಮಕೃಷ್ಣ ಇದ್ದರು.

ವೈಷ್ಣವಿ ಕಾಕತಿಕರ ಪ್ರಾರ್ಥಿಸಿದರು. ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಪ್ರೊ.ಸಿ.ಎಂ. ಮುನ್ನೋಳಿ ಸ್ವಾಗತಿಸಿದರು. ಪ್ರೊ.ಎಸ್.ಎಸ್. ಶಿಂಧೆ ವಂದಿಸಿದರು. ದೇವಯಾನಿ ಶಹಪೂರಕರ ಮತ್ತು ಸಲೋನಿ ಪಾಟೀಲ ನಿರೂಪಿಸಿದರು.

ವಿವಿಧ ತಾಲ್ಲೂಕುಗಳ 18 ತಂಡಗಳು ಪಾಲ್ಗೊಂಡವು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು