ಅಸಲು ಪಾವತಿಸಿದವರ ಬಡ್ಡಿ ಮನ್ನಾಕ್ಕೆ ಆಗ್ರಹ

7
ಸೆ. 24ರಂದು ಮುಖ್ಯಮಂತ್ರಿಗೆ ಮನವಿ ಸಲ್ಲಿಕೆ

ಅಸಲು ಪಾವತಿಸಿದವರ ಬಡ್ಡಿ ಮನ್ನಾಕ್ಕೆ ಆಗ್ರಹ

Published:
Updated:

ಬೆಳಗಾವಿ: ರಾಜ್ಯ ಸಹಕಾರಿ ಕೃಷಿ ಹಾಗೂ ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ನಲ್ಲಿ (ಪಿಕಾರ್ಡ್‌) ಸಾಲ ಪಡೆದಿರುವವರು, ಅಸಲು ಸಂಪೂರ್ಣ ಪಾವತಿಸಿದರೆ ಬಡ್ಡಿ ಮನ್ನಾ ಮಾಡುವಂತೆ ಆಗ್ರಹಿಸಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಸೆ. 24ರಂದು ಬೆಂಗಳೂರಿನಲ್ಲಿ ನಡೆಯುವ ಸಮ್ಮೇಳನದಲ್ಲಿ ಮನವಿ ಸಲ್ಲಿಸಲಾಗುವುದು ಎಂದು ಅಧ್ಯಕ್ಷ ಕೆ. ಷಡಕ್ಷರಿ ತಿಳಿಸಿದರು.

‘ರೈತರಿಗೆ ಬೆಳೆ ಸಾಲ ಮನ್ನಾ ಯೋಜನೆ ಜಾರಿಗೊಳಿಸಲಾಗಿದೆ. ಹೀಗಾಗಿ, ನಮಗೆ ಬಡ್ಡಿಯನ್ನಾದರೂ ಮನ್ನಾ ಮಾಡಬೇಕು ಎನ್ನುವುದು ಬ್ಯಾಂಕ್ ಸದಸ್ಯರ ಒತ್ತಾಯವಾಗಿದೆ. ಇದನ್ನು ಸಹಕಾರ ಸಚಿವರ ಮೂಲಕ ಮುಖ್ಯಮಂತ್ರಿಗೆ ಮನವರಿಕೆ ಮಾಡಿಕೊಡಲಾಗುವುದು’ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

‘ಬ್ಯಾಂಕ್‌ನಿಂದ ಬೆಳೆ ಸಾಲ ಕೊಡುವುದಿಲ್ಲ. ದೀರ್ಘಾವಧಿ ಸಾಲ ಮಾತ್ರ ನೀಡುತ್ತೇವೆ. ಅಸಲು ಪಾವತಿಸಿದವರಿಗೆ ಬಡ್ಡಿ ಮನ್ನಾ ಮಾಡುವುದರಿಂದ 25ಸಾವಿರಕ್ಕೂ ಹೆಚ್ಚಿನ ರೈತರಿಗೆ ಅನುಕೂಲವಾಗಲಿದೆ. ಬೆಳಗಾವಿ ಜಿಲ್ಲೆಯೊಂದರಲ್ಲೇ 4000ಕ್ಕೂ ಹೆಚ್ಚಿನ ಮಂದಿಗೆ ಲಾಭವಾಗಲಿದೆ’ ಎಂದು ಮಾಹಿತಿ ನೀಡಿದರು.

‘ಹೋದ ಸಾಲಿನಲ್ಲಿ ₹ 600 ಕೋಟಿ ಸಾಲ ನೀಡಿದ್ದೆವು. ಈ ಸಾಲಿನಲ್ಲಿ ₹ 500 ಕೋಟಿ ಸಾಲ ಕೊಡುವ ಗುರಿ ಹೊಂದಲಾಗಿದೆ’ ಎಂದರು. 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !