ಗುರುವಾರ, 7 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋಕಾಕ | ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ

Last Updated 17 ಮಾರ್ಚ್ 2023, 6:34 IST
ಅಕ್ಷರ ಗಾತ್ರ

ಗೋಕಾಕ: ವನಿತೆಯರು ವೈಜ್ಞಾನಿಕ ಜಗತ್ತಿನಲ್ಲಿ ಪ್ರತಿಯೊಂದು ಕ್ಷೇತ್ರದಲ್ಲೂ ಸಾಮರ್ಥ್ಯ ತೋರಿಸಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಗೋಕಾಕ ತಾಲ್ಲೂಕು ಘಟಕ ಅಧ್ಯಕ್ಷೆ ಭಾರತಿ ಮದಭಾವಿ ಹೇಳಿದರು.

ಇಲ್ಲಿಯ ಶಿವಾ ಫೌಂಡೇಶನ್ ಮತ್ತು ಬೆಂಗಳೂರಿನ ಸ್ನೇಹಾ ಚಾರಿಟಬಲ್ ಟ್ರಸ್ಟ್ ಆಶ್ರಯದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ಯುಗಾದಿ ಹಬ್ಬದ ಪ್ರಯುಕ್ತ ಬಡ ವಿಧವಾ ಕುಟುಂಬಗಳಿಗೆ ಆಹಾರ ಧಾನ್ಯಗಳ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ನಮ್ಮ ಮುಂದೆ ಸ್ಪೂರ್ತಿಯಾಗಬಲ್ಲ ಸಾಕಷ್ಟು ಮಹಿಳೆಯರು ಇದ್ದಾರೆ’ ಎಂದರು.

ಬಿ.ಕೆ.ಮೇಘಾ ಅಕ್ಕ, ಬ್ಯಾಂಕ್ ಆಫ್ ಬರೋಡಾದ ಗೋಕಾಕ ಶಾಖೆಯ ವ್ಯವಸ್ಥಾಪಕಿ ಜೇನ್ ಆಂಥೋನಿ ಮರಿಯಪ್ಪ, ಸಮಾಜ ಸೇವಕಿ ಐಶ್ವರ್ಯ ಯಂಡಿಗೇರಿ, ಶಕ್ತಿ ಮಹಿಳಾ ಸಂಘದ ಅಧ್ಯಕ್ಷೆ ಲಲಿತಾ ಹೊಸಮನಿ, ಟ್ರಸ್ಟ್‌ನ ಲಕ್ಷ್ಮೀಕಾಂತ ರೆಡ್ಡಿ ಮಾತನಾಡಿದರು.

ಮಹಾದೇವಪ್ಪಣ್ಣ ಮುನವಳ್ಳಿ ಆಂಗ್ಲ ಮಾಧ್ಯಮ ಶಾಲೆಯ ‍ಪ್ರಾಚಾರ್ಯರಾದ ಅನುಪಾ ಕೌಶಿಕ್ ಅಧ್ಯಕ್ಷತೆ ವಹಿಸಿದ್ದರು. ಶಿವಾ ಫೌಂಡೇಶನ್ ಕಾರ್ಯದರ್ಶಿ ಗಿರಿಜಾ ಪೂಜೇರಿ, ಸಂತೋಷ ಬೆಟಗೇರಿ, ಮಾರುತಿ ತುರಾಯಿದಾರ, ವಿಶಾಲ ದೇವರ, ಶಾನೂರ ಹಿರೇಹೊಳಿ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT