ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

International Yoga Day | ಬೆಳಗಾವಿಯಲ್ಲಿ ಯೋಗ ಪ್ರದರ್ಶನ

Published 21 ಜೂನ್ 2024, 1:50 IST
Last Updated 21 ಜೂನ್ 2024, 1:50 IST
ಅಕ್ಷರ ಗಾತ್ರ

ಬೆಳಗಾವಿ: ಇಲ್ಲಿನ ಶಿವಬಸವ ನಗರದ ಕೆಪಿಟಿಸಿಲ್ ಭವನದಲ್ಲಿ ಜಿಲ್ಲಾಡಳಿತ ಆಶ್ರಯದಲ್ಲಿ ಶುಕ್ರವಾರ ನಡೆದ ಯೋಗ ದಿನಾಚರಣೆಯಲ್ಲಿ ನೂರಾರು ಜನರು ಉತ್ಸಾಹದಿಂದ ಯೋಗಾಸನ ಮಾಡಿದರು.

ವಿವಿಧ ಯೋಗಾಸನ ಪ್ರದರ್ಶಿಸಿದ ತರಬೇತುದಾರರಾದ ಆರತಿ ಪಡಸಲಗಿ ಅವರು, ಯೋಗದ ಮಹತ್ವ ಸಾರಿದರು.

ಸಂಸದ ಜಗದೀಶ ಶೆಟ್ಟರ್, ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜಿಲ್ಲಾ ಆಯುಷ್ ಇಲಾಖೆ ಅಧಿಕಾರಿ ಡಾ. ಶ್ರೀಕಾಂತ ಸುಣಧೋಳಿ ಉಪಸ್ಥಿತರಿದ್ದರು.

ಬೇರೆ ದೇಶಗಳಿಂದ ಬಂದಿದ್ದ ಯೋಗಪಟುಗಳು, ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT