ಸೋಮವಾರ, 4 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮದುರ್ಗ: ನೇಕಾರರಿಗೆ ಗುರುತಿನ ಚೀಟಿ ವಿತರಣೆ

Published 24 ಜನವರಿ 2024, 13:10 IST
Last Updated 24 ಜನವರಿ 2024, 13:10 IST
ಅಕ್ಷರ ಗಾತ್ರ

ರಾಮದುರ್ಗ: ‘ನೇಕಾರ ಮತ್ತು ರೈತ ರಾಜ್ಯದ ಎರಡು ಆಧಾರ ಸ್ತಂಭಗಳಿದ್ದಂತೆ. ಅವರಿಗೆ ಎಂದೂ ಅನ್ಯಾಯವಾಗದಂತೆ ಸರ್ಕಾರಗಳು ನೋಡಿಕೊಳ್ಳಬೇಕು’ ಎಂದು ವಿಧಾನ ಸಭೆಯ ಮುಖ್ಯ ಸಚೇತಕ ಅಶೋಕ ಪಟ್ಟಣ ಹೇಳಿದರು.

ಪಟ್ಟಣದ ನಾರಾಯಣ ಪೇಟೆಯ ವಿಠ್ಠಲ ಹರಿ ಮಂದಿರದಲ್ಲಿ ತಾಲ್ಲೂಕು ದೇವಾಂಗ ಸಮಾಜವು ಕೈಮಗ್ಗ ಮತ್ತು ಜವಳಿ ಇಲಾಖೆ ಸಹಯೋಗದೊಂದಿಗೆ ಆಯೋಜಿಸಿದ್ದ ನೇಕಾರರ ಗುರುತಿನ ಚೀಟಿ ವಿತರಣೆಗೆ ಚಾಲನೆ ನೀಡಿ ಮಾತನಾಡಿದರು.

‘ನುಡಿದಂತೆ ನಡೆದ ಸರ್ಕಾರ ನಮ್ಮದು. ಚುನಾವಣೆ ಸಂದರ್ಭದಲ್ಲಿ ಹೇಳಿದಂತೆ ನೇಕಾರರ ವಿದ್ಯುತ್ ಮಗ್ಗಗಳಿಗೆ 10 ಎಚ್‍ಪಿಗಳ ವರೆಗೆ ಉಚಿತ ವಿದ್ಯುತ್ ಯೋಜನೆ ಈಗಾಗಲೇ ಜಾರಿಯಲ್ಲಿದೆ. ಈಗ ನೇಕಾರ ಕಾರ್ಮಿಕರಿಗೆ ಗುರುತಿನ ಚೀಟಿ ನೀಡಲಾಗುತ್ತಿದೆ. ನೇಕಾರರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧವಾಗಿದೆ’ ಎಂದು ಹೇಳಿದರು.

ಬೆಳಗಾವಿಯ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕ ವಾಸುದೇವ ದೊಡಮನಿ, ರಾಜ್ಯ ದೇವಾಂಗ ಸಂಘದ ಉಪಾಧ್ಯಕ್ಷ ಶಂಕ್ರಣ್ಣ ಮುರುಡಿ, ನಿರ್ದೇಶಕ ಶಿವಾನಂದ ಬಳ್ಳಾರಿ, ಪುರಸಭೆ ಸದಸ್ಯ ಶಂಕರ ಬೆನ್ನೂರ ಮಾತನಾಡಿದರು.

ನಿರಂಜನಸ್ವಾಮಿ ದೇವಾಂಗಮಠ, ಅಜ್ಜಿಸ್ವಾಮಿ ದೇವಾಂಗಮಠ ಸಾನ್ನಿಧ್ಯ ವಹಿಸಿದ್ದರು. ಬನಶಂಕರಿ ದೇವಾಂಗ ಸಮಾಜ ಅಧ್ಯಕ್ಷ ನಾರಾಯಣಪ್ಪ ಬೆನ್ನೂರ, ತಾಲ್ಲೂಕು ನೇಕಾರ ಹಾಗೂ ದೇವಾಂಗ ಸಮಾಜ ಸೇವಾ ಸಂಘದ ಅಧ್ಯಕ್ಷ ಅಶೋಕ ಸೂಳಿಭಾವಿ, ಬನಶಂಕರಿ ದೇವಸ್ಥಾನ ಜಿರ್ಣೋದ್ಧಾರ ಸಮಿತಿ ಅಧ್ಯಕ್ಷ ಏಕನಾಥ ಕೊಣ್ಣೂರ, ಈರಪ್ಪಜ್ಜ ಕೊಣ್ಣೂರ, ಗಾಯತ್ರಿ ದೇವಾಂಗಮಠ, ಕೈಮಗ್ಗ ಮತ್ತು ಜವಳಿ ಇಲಾಖೆ ಸಹಾಯಕ ನಿರ್ದೇಶಕ ಬಿ.ಎ. ಪೀರಜಾದೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT