ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

700 ಎಕರೆಯಲ್ಲಿ ಐಟಿ ಪಾರ್ಕ್‌: ಡಾ.ಸಿ.ಎನ್. ಅಶ್ವತ್ಥನಾರಾಯಣ

Last Updated 13 ಅಕ್ಟೋಬರ್ 2021, 12:45 IST
ಅಕ್ಷರ ಗಾತ್ರ

ಬೆಳಗಾವಿ: ‘ನಗರದಲ್ಲಿ 700 ಎಕರೆ ಜಾಗದಲ್ಲಿ ಐಟಿ ಪಾರ್ಕ್‌ ಆರಂಭಿಸಿ, ಈ ಭಾಗದಲ್ಲಿ ಉದ್ಯೋಗ ಸೃಷ್ಟಿಸಲು ಪ್ರಯತ್ನಿಸಲಾಗುತ್ತಿದೆ’ ಎಂದು ಉನ್ನತ ಶಿಕ್ಷಣ ಹಾಗೂ ಐಟಿ-ಬಿಟಿ, ಕೌಶಲ ಅಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು.

ಇಲ್ಲಿನ ಆರ್‌ಪಿಡಿ ವೃತ್ತದಲ್ಲಿರುವ ಬಿಜೆಪಿ ಗ್ರಾಮಾಂತರ ಜಿಲ್ಲಾ ಕಚೇರಿಗೆ ಬುಧವಾರ ಭೇಟಿ ನೀಡಿ ಪದಾಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದರು.

‘ಬೆಳಗಾವಿ ಸುತ್ತಲಿನ ಪ್ರತಿಭಾವಂತ ವಿದ್ಯಾರ್ಥಿಗಳು ಬೆಂಗಳೂರು, ಪುಣೆ, ಮುಂಬೈ ನಗರಗಳಿಗೆ ಉದ್ಯೋಗ ಆರಿಸಿ ಹೋಗುವ ಬದಲು ಇಲ್ಲೇ ಸೃಷ್ಟಿಸಲು ಕ್ರಮ ವಹಿಸಲಾಗುವುದು. ಪುಣೆಯಲ್ಲಿರುವ ಐಟಿ ಕಚೇರಿಗಳನ್ನು ಮೀರಿಸುವಂತೆ ನಗರದಲ್ಲೂ ನಿರ್ಮಿಸುವ ಪ್ರಯತ್ನ ನಡೆದಿದೆ’ ಎಂದರು.

‘ಮುಂಬರುವ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಅತ್ಯಧಿಕ ಮತಗಳ ಅಂತರದಿಂದ ಗೆಲುವು ಸಾಧಿಸುವ ನಿಟ್ಟಿನಲ್ಲಿ ಕಾರ್ಯಕರ್ತರು, ಪದಾಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಶ್ರಮಿಸಬೇಕು’ ಎಂದು ತಿಳಿಸಿದರು.

‘ರಾಜ್ಯದಲ್ಲಿ ಅವಶ್ಯವಿರುವ ಕಡೆಗಳಲ್ಲಿ ಪದವಿ ಮಹಾವಿದ್ಯಾಲಯ ಹಾಗೂ ಡಿಪ್ಲೊಮಾ ಕಾಲೇಜುಗಳನ್ನು ಪ್ರಾರಂಭಿಸಲಾಗುತ್ತಿದೆ. ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ನೂತನ ಕಟ್ಟಡ ಕಾಮಗಾರಿ ಸದ್ಯದಲ್ಲೇ ಆರಂಭವಾಗಲಿದೆ’ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಬಿಜೆಪಿ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ಪಾಟೀಲ ಮಾತನಾಡಿದರು. ಚಿಕ್ಕೋಡಿ ಜಿಲ್ಲಾ ಘಟಕದ ಅಧ್ಯಕ್ಷ ಡಾ.ರಾಜೇಶ ನೇರ್ಲಿ, ಮಹಾನಗರ ಜಿಲ್ಲಾ ಘಟಕದ ಅಧ್ಯಕ್ಷ ಶಶಿಕಾಂತ ಪಾಟೀಲ, ವಿಧಾನಪರಿಷತ್ ಸದಸ್ಯರಾದ ಹನುಮಂತ ನಿರಾಣಿ, ಅರುಣ ಶಹಾಪೂರ, ರಾಜ್ಯ ಘಟಕದ ಕಾರ್ಯದರ್ಶಿ ಉಜ್ವಲಾ ಬಡವನಾಚೆ, ಧನಶ್ರೀ ದೇಸಾಯಿ ಇದ್ದರು.

ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಮಹೇಶ ಮೋಹಿತೆ ಸ್ವಾಗತಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT