ಗುರುವಾರ , ಮಾರ್ಚ್ 23, 2023
21 °C

ಬೆಳಗಾವಿ: ಆಭರಣ ಮಳಿಗೆಗಳು, ಮಾಲೀಕರ ಮನೆಗಳ ಮೇಲೆ ಐಟಿ ದಾಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಜಿಲ್ಲೆಯ ‌ವಿವಿಧ ಆಭರಣ ಮಳಿಗೆಗಳು ಹಾಗೂ ಅವುಗಳ ಮಾಲೀಕರ ಮನೆಗಳ ಮೇಲೆ ಆದಾಯ ತೆರಿಗೆ (ಐಟಿ) ಅಧಿಕಾರಿಗಳು ಏಕಕಾಲಕ್ಕೆ ಸೋಮವಾರ ದಾಳಿ ನಡೆಸಿದ್ದಾರೆ.

ಬೆಳಗಾವಿಯ ಖಡೇಬಜಾರ್‌ನಲ್ಲಿರುವ ಪೋತದಾರ್ ಜ್ಯುವೆಲರ್ಸ್ ಮಳಿಗೆ ಮೇಲೆ ಹಾಗೂ ಅದರ ಮಾಲೀಕ ಅನಿಲ ಪೋತದಾರ ಅವರ ಜಾಧವ ನಗರದಲ್ಲಿರುವ ಮನೆ ಮೇಲೆ ದಾಳಿ ನಡೆಸಿದ್ದಾರೆ. ಪೊಲೀಸ್ ಭದ್ರತೆಯಲ್ಲಿ, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಗೋಕಾಕದ ಬಾಪ್ನಾ ಸಹೋದರರಿಗೆ ಸೇರಿದ ಮಳಿಗೆ ಹಾಗೂ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ವಿಜಯ ಬಾಪ್ನಾ ಹಾಗೂ ಪುರುಷೋತ್ತಮ ಬಾಪ್ನಾ ಅವರ ಮನೆಗಳು ಹಾಗೂ ಅಂಗಡಿಯಲ್ಲಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಗೋವಾ ಹಾಗೂ ಬೆಳಗಾವಿಯ ಐಟಿ ಅಧಿಕಾರಿಗಳು ಪ್ರಕ್ರಿಯೆ ನಡೆಸುತ್ತಿದ್ದಾರೆ. ತೆರಿಗೆ ವಂಚನೆ ಮಾಹಿತಿ ಆಧರಿಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು