ಶುಕ್ರವಾರ, 11 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ನಾಗಮಂಗಲ ಹಿಂಸಾಚಾರ | ಅಲ್ಪಸಂಖ್ಯಾತರ ರಕ್ಷಣೆ, ಹಿಂದೂಗಳ ಬಲಿಪಶು: ಶೆಟ್ಟರ್‌ ಆರೋಪ

Published : 13 ಸೆಪ್ಟೆಂಬರ್ 2024, 13:52 IST
Last Updated : 13 ಸೆಪ್ಟೆಂಬರ್ 2024, 13:52 IST
ಫಾಲೋ ಮಾಡಿ
Comments

ಬೆಳಗಾವಿ/ಹುಬ್ಬಳ್ಳಿ: ‘ನಾಗಮಂಗಲದಲ್ಲಿ ನಡೆದ ಹಿಂಸಾಚಾರಕ್ಕೆ ಅಲ್ಪಸಂಖ್ಯಾತರೇ ಕಾರಣ. ಆದರೆ, ಹಿಂದೂಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ತಪ್ಪು ಮಾಡಿದವರನ್ನು ಕಾಂಗ್ರೆಸ್‌ ರಕ್ಷಿಸಿ, ಹಿಂದೂಗಳನ್ನು ಬಲಿಪಶು ಮಾಡುತ್ತದೆ’ ಎಂದು ಸಂಸದ ಜಗದೀಶ ಶೆಟ್ಟರ್‌ ಆರೋಪಿಸಿದರು.

‘ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಾಗಲೆಲ್ಲ ಕೋಮು ಗಲಭೆ ಹೆಚ್ಚುತ್ತದೆ. ಗಣೇಶ ಮೂರ್ತಿ ಮೆರವಣಿಗೆ ಮಸೀದಿ ಎದುರು ಬರಬಾರದು ಎನ್ನಲು ಅವರಿಗೆ ಏನು ಹಕ್ಕು ಇದೆ? ಮಸೀದಿಗೆ ಬೆದರಿಕೆ ಇದ್ದರೆ ರಕ್ಷಣೆ ಕೊಡಿ. ಅದರ ಬದಲು ಅಲ್ಲಿ, ಇಲ್ಲಿ ಹೋಗಬೇಡಿ ಎಂದರೆ ಹೇಗೆ?’ ಎಂದು ಅವರು ಗುರುವಾರ ಸುದ್ದಿಗಾರರಿಗೆ ತಿಳಿಸಿದರು.

‘ಹಿಂಸಾಚಾರ ಸಣ್ಣ ಪ್ರಕರಣ ಎಂದು ಗೃಹ ಸಚಿವ ಜಿ.ಪರಮೇಶ್ವರ್ ನೀಡಿದ ಹೇಳಿಕೆಯು ಹಿಂದೂಗಳ ಬಗ್ಗೆ ಕಾಂಗ್ರೆಸ್‌ಗೆ ಇರುವ ಮನಸ್ಥಿತಿ ತೋರಿಸುತ್ತದೆ. ಅಲ್ಪಸಂಖ್ಯಾತರ ತುಷ್ಟೀಕರಣದ ನೀತಿಯಿಂದ ಇಂಥ ಘಟನೆ ಆಗುತ್ತವೆ’ ಎಂದರು.

ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮಾತನಾಡಿ, ‘ಗಣೇಶಮೂರ್ತಿ ಪ್ರತಿಷ್ಠಾಪನೆ, ವಿಸರ್ಜನಾ ಮೆರವಣಿಗೆಗೆ ಪೊಲೀಸ್‌ ಇಲಾಖೆ ಅನುಮತಿ ಪಡೆಯಲಾಗಿದೆ. ಮೆರವಣಿಗೆ ಹೋಗುವ ರಸ್ತೆ ಬದಿಯಲ್ಲಿ ಮಸೀದಿ ಇದೆ ಎಂದು, ವಾದ್ಯ ಬಾರಿಸಬಾರದು ಎಂದರೆ ಏನರ್ಥ’ ಎಂದು ಪ್ರಶ್ನಿಸಿದರು.

‘ಪ್ರಕರಣಕ್ಕೆ ಸಂಬಂಧಿಸಿ ಹಿಂದೂ ಯುವಕನನ್ನು ಪೊಲೀಸರು ಮೊದಲ ಆರೋಪಿಯನ್ನಾಗಿ ಮಾಡಿದ್ದು ಖಂಡನೀಯ. ಪಕ್ಷದ ರಾಜ್ಯಾಧ್ಯಕ್ಷರು, ವಿರೋಧ ಪಕ್ಷದ ನಾಯಕರು ಸ್ಥಳಕ್ಕೆ ಭೇಟಿ ನೀಡಿ ಬಂದಿದ್ದಾರೆ. ರಾಜಕೀಯ ಒತ್ತಡಕ್ಕೆ ಒಳಗಾಗಿ ಅಲ್ಲಿಯ ಪೊಲೀಸ್‌ ವರಿಷ್ಠಾಧಿಕಾರಿ ಹುಚ್ಚರ ಹಾಗೆ ವರ್ತಿಸಬಾರದು’ ಎಂದರು.

ಪ್ರಲ್ಹಾದ ಜೋಶಿ
ಪ್ರಲ್ಹಾದ ಜೋಶಿ
ಗೃಹ ಇಲಾಖೆ ಎಸ್‌ಡಿಪಿಐ ಕಪಿಮುಷ್ಠಿಯಲ್ಲಿ ಸಿಲುಕಿರುವ ಅನುಮಾನವಿದೆ. ರಾಜ್ಯವನ್ನು ತಾಲಿಬಾನ್‌ ಬಾಂಗ್ಲಾ ಆಗಲು ಬಿಡಬೇಡಿ. ಹಿಂದೂ ಧಾರ್ಮಿಕ ಚಟುವಟಿಕೆ ಮಾಡಲಾಗದದ ಪರಿಸ್ಥಿತಿ ನಿರ್ಮಾಣವಾಗಿದೆ.
ಸುನೀಲಕುಮಾರ ಪ್ರಧಾನ ಕಾರ್ಯದರ್ಶಿ ಬಿಜೆಪಿ ರಾಜ್ಯ ಘಟಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT