ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಹಿರೇಕೋಡಿಯ ನಂದಿಪರ್ವತ ಜೈನ ಆಶ್ರಮದಿಂದ ಮುನಿ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜ ಅವರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದು, ಅವರ ದೇಹ ಶುಕ್ರವಾರ ರಾತ್ರಿ ಗ್ರಾಮದ ಹೊರವಲಯದಲ್ಲಿ ಪತ್ತೆಯಾಗಿದೆ. ಮೈಮೇಲೆ ಗಾಯಗಳಾಗಿವೆ.

ಎರಡು ದಿನಗಳಿಂದ ನಾಪತ್ತೆಯಾಗಿದ್ದ ಮುನಿ ಮಹಾರಾಜ ಅವರನ್ನು ಹುಡುಕಿಕೊಡುವಂತೆ ಭಕ್ತರು ಚಿಕ್ಕೋಡಿ ಪೊಲೀಸ್ ಠಾಣೆಗೆ ಶುಕ್ರವಾರ ದೂರು ನೀಡಿದ್ದರು.

‘ಬುಧವಾರ ರಾತ್ರಿ 10ರವರೆಗೆ ಆಶ್ರಮದ ಕೋಣೆಯಲ್ಲಿದ್ದ ಮುನಿಗಳು, ಗುರುವಾರ ಬೆಳಿಗ್ಗೆ ಕಾಣೆಯಾಗಿದ್ದಾರೆ. ಅವರು ಬಳಸುತ್ತಿದ್ದ ಕಮಂಡಲ ಮತ್ತು ಮೊಬೈಲ್ ಕೋಣೆಯಲ್ಲಿವೆ’ ಎಂದು ಭಕ್ತರು ತಿಳಿಸಿದ್ದರು.

ಮುಂಜಾಗ್ರತಾ ಕ್ರಮವಾಗಿ ಹಿರೇಕೋಡಿ ಗ್ರಾಮದಲ್ಲಿ 500ಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.