ಬೆಳಗಾವಿ: ‘ಜೈನ ಸಮುದಾಯದ ವಿವಿಧ ಬೇಡಿಕೆಗಳಿಗೆ ಸಂಬಂಧಿಸಿ ಸರ್ಕಾರದ ಗಮನಸೆಳೆಯಲು ಸಮಸ್ತ ಜೈನ ಅಲ್ಪಸಂಖ್ಯಾತರ ಹೋರಾಟ ಸಮಿತಿ ವತಿಯಿಂದ ತಾಲ್ಲೂಕಿನ ಬಸ್ತವಾಡದಲ್ಲಿ ಡಿ.9ರಂದು ಬೆಳಿಗ್ಗೆ 11ಕ್ಕೆ ಜೈನ ಸಮಾವೇಶ ಆಯೋಜಿಸಲಾಗಿದೆ’ ಎಂದು ಮುಖಂಡ ವಿನೋದ ದೊಡ್ಡಣ್ಣವರ ಹೇಳಿದರು.

ಇಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ಸಮಾವೇಶದಲ್ಲಿ ಜೈನ ಸಮುದಾಯದ 10 ಸಾವಿರಕ್ಕೂ ಅಧಿಕ ಜನರು ಪಾಲ್ಗೊಂಡು, ನಮ್ಮ ಹಕ್ಕಿಗಾಗಿ ಧ್ವನಿ ಎತ್ತಲಿದ್ದೇವೆ’ ಎಂದರು.

‘ರಾಜ್ಯ ಸರ್ಕಾರವು ಜೈನ ಅಭಿವೃದ್ಧಿ ನಿಗಮ ಸ್ಥಾಪಿಸಿ, ವಾರ್ಷಿಕ ₹200 ಕೋಟಿ ಮೀಸಲಿಡಬೇಕು. ಜೈನ ಸಮುದಾಯದವರು ಸಸ್ಯಾಹಾರಿಗಳು. ಹಾಗಾಗಿ ಜೈನ ಸಮುದಾಯದ ಶಿಕ್ಷಣ ಸಂಸ್ಥೆಗಳಲ್ಲಿ ಸರ್ಕಾರದ ವತಿಯಿಂದ ಮೊಟ್ಟೆ ನೀಡುವುದನ್ನು ನಿಲ್ಲಿಸಬೇಕು’ ಎಂದು ಒತ್ತಾಯಿಸಿದರು.

ಮುಖಂಡರಾದ ಅಭಯ ಅವಲಕ್ಕಿ, ವರ್ಧಮಾನ ಮಾರ್ಗನಕೊಪ್ಪ, ರಾಜೇಂದ್ರ ಜೈನ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.