ಭಾನುವಾರ, ಅಕ್ಟೋಬರ್ 24, 2021
23 °C

ಬೆಳಗಾವಿಯಲ್ಲಿ ಮುಖ್ಯಮಂತ್ರಿ: ಚರ್ಚೆಗೆ ಗ್ರಾಸವಾದ ಜಾರಕಿಹೊಳಿ ಸಹೋದರರ ಗೈರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಳಗಾವಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಿಲ್ಲಾ ಪ್ರವಾಸದ ವೇಳೆ ಜಾರಕಿಹೊಳಿ ಸಹೋದರರಾದ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಗೈರು ಹಾಜರಾಗಿದ್ದು ಚರ್ಚೆಗೆ ಗ್ರಾಸವಾಗಿದೆ.

ಮುಖ್ಯಮಂತ್ರಿಯು ಹುಕ್ಕೇರಿ ತಾಲ್ಲೂಕಿನಲ್ಲಿ ಶನಿವಾರ ಸಂಜೆಯಿಂದ ಪ್ರವಾಸ ಕೈಗೊಂಡು ನಗರದಲ್ಲಿ ತಂಗಿದ್ದರು. ಭಾನುವಾರವೂ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು. ಆದರೆ, ಈ ವೇಳೆ ಜಾರಕಿಹೊಳಿ ಸಹೋದರರು ದೂರ ಉಳಿದರು. ಹಿಂದಿನ ಭೇಟಿಯ ವೇಳೆಯಲ್ಲೂ ಅವರು ಬೊಮ್ಮಾಯಿ ಭೇಟಿ ಆಗಿರಲಿಲ್ಲ. ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಕೂಡ ಕಾಣಿಸಿಕೊಳ್ಳಲಿಲ್ಲ.

ಈ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ‘ಅದೇನು ಸಮಸ್ಯೆ ಅಲ್ಲ. ಬರುವುದಿಲ್ಲ ಎಂದು ತಿಳಿಸಿದ್ದರು. ಕ್ಷೇತ್ರದ ಅಭಿವೃದ್ಧಿ ವಿಚಾರವಾಗಿ ಬಾಲಚಂದ್ರ  ಜಾರಕಿಹೊಳಿ ಪತ್ರ ಬರೆದಿದ್ದಾರೆ’ ಎಂದಷ್ಟೆ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು