ಬುಧವಾರ, ನವೆಂಬರ್ 20, 2019
21 °C

ಪ್ರವಾಹದಿಂದಾಗಿ ಸಣ್ಣ ನೀರಾವರಿ ಇಲಾಖೆಗೆ ₹ 454 ಕೋಟೆ ಹಾನಿ

Published:
Updated:

ಬೆಳಗಾವಿ: ರಾಜ್ಯದಲ್ಲಿ ಪ್ರವಾಹದಿಂದಾಗಿ ಸಣ್ಣ ನೀರಾವರಿ ಇಲಾಖೆಗೆ ₹ 454 ಕೋಟೆ ಹಾನಿಯಾಗಿದೆ. ಸೇತುವೆ, ಬ್ಯಾರೇಜ್, ಕೆರೆಗಳು ಸೇರಿದಂತೆ 600 ಆಸ್ತಿಗಳಿಗೆ ಹಾನಿಯಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಹಾಗೂ ಸಣ್ಣ‌ ನೀರಾವರಿ ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದರು.

ಗೋಕಾಕ ಹೊರವಲಯದಲ್ಲಿ ಮಾರ್ಕಂಡೇಯ ನದಿ ಪ್ರವಾಹದಿಂದ ಹಾನಿಗೊಳಗಾದ ಗಟ್ಟಿ ಬಸವಣ್ಣ ಏತ ನೀರಾವರಿ ಯೋಜನಾ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಪತ್ರಕರ್ತರೊಂದಿಗೆ ಅವರು ಮಾತನಾಡಿದರು.

ಬೆಳಗಾವಿ, ಉತ್ತರಕನ್ನಡ, ಹಾವೇರಿ, ವಿಜಯಪುರ ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಹೆಚ್ಚಿನ ಹಾನಿಯಾಗಿದೆ. ₹ 5 ಲಕ್ಷ ವೆಚ್ಚದಲ್ಲಿ ದುರಸ್ತಿ ಮಾಡಬಹುದಾದ ಕಾಮಗಾರಿಗಳನ್ನು ಮೊದಲ ಹಂತದಲ್ಲಿ ಕೈಗೊಳ್ಳಲಾಗಿದೆ. ರಸ್ತೆ ಸಂಪರ್ಕ ಕಡಿತಗೊಂಡಿದ್ದರೆ ಅಂತಹ ಕಡೆಗಳಲ್ಲಿ ಆದ್ಯತೆ ಮೇರೆಗೆ ಕೈಗೊಳ್ಳಲಾಗಿದೆ ಎಂದು ಮಾಹಿತಿ ‌ನೀಡಿದರು.

ಬೆಳಗಾವಿ ಜಿಲ್ಲೆಯೊಂದರಲ್ಲೇ ₹ 55 ಕೋಟಿ‌ ನಷ್ಟವಾಗಿದೆ ಎಂದರು.

ಎನ್ ಡಿ ಆರ್ ಎಫ್ ಮಾರ್ಗಸೂಚಿಗಳ ಪ್ರಕಾರ, ಕೇಂದ್ರ ಸರ್ಕಾರದಿಂದ ಇಲಾಖೆಗೆ ₹ 11 ಕೋಟಿಯಷ್ಟೇ ಅನುದಾನ ದೊರೆಯಲಿದೆ. ಉಳಿದದ್ದನ್ನು ರಾಜ್ಯ ಸರ್ಕಾರದಿಂದ ಕೊಡಬೇಕಾಗುತ್ತದೆ ಎಂದರು.

ಪ್ರತಿಕ್ರಿಯಿಸಿ (+)