ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೆರೆ ಸಂತ್ರಸ್ತರಿಗೆ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ

Last Updated 9 ಆಗಸ್ಟ್ 2021, 13:10 IST
ಅಕ್ಷರ ಗಾತ್ರ

ಬೆಳಗಾವಿ: ‘ಜಿಲ್ಲೆಯಲ್ಲಿ ನೆರೆ ಮತ್ತು ಅತಿವೃಷ್ಟಿಯಿಂದ ಮನೆ, ಬೆಳೆ ಮೊದಲಾದವುಗಳನ್ನು ಕಳೆದುಕೊಂಡಿರುವ ಸಂತ್ರಸ್ತರಿಗೆ ಕೂಡಲೇ ಸಮರ್ಪಕ ಪರಿಹಾರ ನೀಡಬೇಕು’ ಎಂದು ಆಗ್ರಹಿಸಿ ಜೆಡಿಎಸ್‌ ಮುಖಂಡರು ಮತ್ತು ಕಾರ್ಯಕರ್ತರು ಇಲ್ಲಿನ ರಾಣಿ ಚನ್ನಮ್ಮ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

‘2019ರಲ್ಲಿ ಹಾನಿ ಅನುಭವಿಸಿದವರಲ್ಲಿ ಬಹುತೇಕರಿಗೆ ಇಂದಿಗೂ ಪರಿಹಾರ ಸಿಕ್ಕಿಲ್ಲ. ಅವರಿಗೂ ನ್ಯಾಯ ದೊರಕಿಸಿಕೊಡಬೇಕು. ತ್ವರಿತವಾಗಿ ಸಮೀಕ್ಷೆ ನಡೆಸಿ ಸಂತ್ರಸ್ತರಿಗೆ ಆಸರೆಯಾಗಿ ನಿಲ್ಲಬೇಕು’ ಎಂದು ಒತ್ತಾಯಿಸಿದರು.

‘ಕಲ್ಯಾಣ ಕರ್ನಾಟಕಕ್ಕೆ ನೀಡಿದಂತೆ ವಿಶೇಷ ಸ್ಥಾನಮಾನವನ್ನು ಬೆಳಗಾವಿ ವಿಭಾಗದ ಜನರಿಗೂ ಕೊಡಬೇಕು. ಕೃಷ್ಣಾ ಕಣಿವೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಬೇಕು. ಇದಕ್ಕಾಗಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಬೇಕು’ ಎಂದು ಆಗ್ರಹಿಸಿದರು.

‘ಜೆಡಿಎಸ್‌–ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರವಿದ್ದಾಗ ಬೆಳಗಾವಿಯಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ನಡೆದಿತ್ತು. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಇಲ್ಲಿ ಅಧಿವೇಶನ ಆಗಿಲ್ಲ. ಈ ಬಾರಿ ನಡೆಸಬೇಕು. ಈ ಭಾಗದ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

ಜಿಲ್ಲಾ ಘಟಕದ ಅಧ್ಯಕ್ಷ ಶಂಕರ ಮಾಡಲಗಿ, ಭೀಮಪ್ಪ ಗಡಾದ, ನಾಸಿರ ಬಾಗವಾನ, ಎಂ.ವೈ. ಸೋಮಣ್ಣವರ, ಜಿ.ಎಸ್. ಗೋಕಾಕ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT